ಕೇಶಿರಾಜ

ಕೇಶಿರಾಜನ ಕಾಲ ಸುಮಾರು ಕ್ರಿ.ಶ.೧೨೬೦. ಈತನು ಜನ್ನನ ಸೋದರಳಿಯ. ವ್ಯಾಕರಣವನ್ನು ವಿವರಿಸುವ ಶಬ್ದಮಣಿದರ್ಪಣ ಈತನ ಪ್ರಖ್ಯಾತ ಕೃತಿ.
ಕೇಶಿರಾಜನ ತಂದೆ ಯೋಗಿಪ್ರವರನಾದ ‘ಮಲ್ಲಿಕಾರ್ಜುನ’,ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ “ಸುಮನೋಬಾಣ” ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.
ಕವಿ ಸುಮನೋಬಾಣನ ಯಾ
-ದವಕಟಕಾಚಾರ್ಯನೆಸೆವ ದೌಹಿತ್ರನೆ ನಾಂ|
ಕವಿ ಕೇಶವನೆಂ ಯೋಗಿ
ಪ್ರವರಚಿದಾನಂದ ಮಲ್ಲಿಕಾರ್ಜುನ ಸುತನೆಂ||
(ಶಬ್ದಮಣಿದರ್ಪಣ-ಪೀಠಿಕೆ-೨)
ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಗೂ ಅವನ ಮಗ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.

ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.

ಶಬ್ದಮಣಿದರ್ಪಣವನ್ನು ಜೆ.ಗ್ಯಾರೆಟ್ ಎನ್ನುವವರು ಕ್ರಿ.ಶ. ೧೮೬೮ರಲ್ಲಿ ಪ್ರಕಟಿಸಿದರು. ಕ್ರಿ.ಶ.೧೮೭೨ರಲ್ಲಿ ರೆವೆರಂಡ್ ಕಿಟ್ಟೆಲ್ ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. ೧೯೫೧ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು ೧೯೫೮ರಲ್ಲಿ ಡಿ.ಎಲ್.ನರಸಿಂಹಾಚಾರ್ ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.

ಶಬ್ದಮಣಿದರ್ಪಣ

  • ಕೇಶಿರಾಜನ “ಶಬ್ದಮಣಿದರ್ಪಣ”ವು ಸಮಗ್ರವೂ ಸ್ವಾರಸ್ಯವೂ ಆದ ಉತ್ತಮ ವ್ಯಾಕರಣ ಗ್ರಂಥ. ಇಡೀ ಕೃತಿ ಕಂದಪದ್ಯಗಳ ರೂಪದಲ್ಲಿದೆ. ಎಂಟು ಅಧ್ಯಾಯಗಳನ್ನು ಒಳಗೊಂಡಿದೆ. ಇಲ್ಲಿ ಅಧ್ಯಾಯಗಳಿಗೆ ಪ್ರಕರಣ ಎನ್ನಲಾಗುತ್ತದೆ. ಕಂದಪದ್ಯಗಳಿಗೆ ‘ಸೂತ್ರ’ವೆಂದೂ, ಗದ್ಯರೂಪದ ವಿವರಣೆಗೆ ‘ವೃತ್ತಿ’ಯೆಂದೂ, ವ್ಯಾಕರಣದ ಉದಾಹರಣೆಗಳಿಗೆ ‘ಪ್ರಯೋಗ’ವೆಂದು ಕರೆದು, ತನ್ನ ಗ್ರಂಥಕ್ಕೆ ೨ನೇ ನಾಗವರ್ಮನ “ಶಬ್ದಸ್ಪೃತಿ ಮತ್ತು ಕಾವ್ಯಾವಲೋಕನ” ಗ್ರಂಥಗಳ ‘ಸೂತ್ರ’, ‘ವೃತ್ತಿ’ ಮತ್ತು ‘ಪ್ರಯೋಗ’ಗಳನ್ನು ಆಧರಿಸಿದ್ದಾನೆ.
  • “ಶಬ್ದಮಣಿದರ್ಪಣ”ವು ೧೩ನೇ ಶತಮಾನಕ್ಕೆ ಮೊದಲು ಹಳಗನ್ನಡ ಭಾಷಾಸ್ಥಿತಿಗತಿಗಳು ಹೇಗಿದ್ದುವೆಂಬುದನ್ನು ಸವಿಸ್ತಾರವಾಗಿ, ಸಪ್ರಮಾಣ ವಿವೇಚನೆಯಿಂದ ವರ್ಣಿಸುತ್ತದೆ. ಇದರೊಳಗೆ ಸಂಧಿ, ನಾಮ, ಸಮಾಸ, ತದ್ಧಿತ, ಆಖ್ಯಾತ, ಧಾತು, ಅಪಭ್ರಂಶ, ಅವ್ಯಯ ಎಂಬ ಹೆಸರಿನ ಎಂಟು ಪ್ರಕರಣಗಳಿವೆ.
  • ಪೂರ್ವಕವಿಗಳ ಪ್ರಯೋಗಗಳನ್ನು ಯಥೋಚಿತವಾಗಿ ಉದಾಹರಿಸುವ ಕ್ರಮವನ್ನು ಇಲ್ಲಿ ಅನುಸರಿಸಲಾಗಿದೆ.

wikipedia

ಇವುಗಳೂ ನಿಮಗಿಷ್ಟವಾಗಬಹುದು

Kumaravyasa

ಕರ್ಣಾಟ ಭಾರತ ಕಥಾಮಂಜರಿ

Share this on WhatsApp ಕುಮಾರವ್ಯಾಸ ವಿಶಿಷ್ಟ ಶಕ್ತಿಯ ಸ್ವತಂತ್ರ ಕವಿ. ಕರ್ನಾಟ ಭಾರತ ಕಥಾ ಮಂಜರಿ ಅಥವಾ ಕುಮಾರವ್ಯಾಸ …

Loading...
Facebook Messenger for Wordpress