ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 11

ಶ್ಲೋಕ – 18

ತ್ವಮಕ್ಷರಂ ಪರಮಂ ವೇದಿತವ್ಯಂ ತ್ವಮಸ್ಯ ವಿಶ್ವಸ್ಯ ಪರಂ ನಿಧಾನಮ್ ।
ತ್ವಮವ್ಯಯಃ ಶಾಶ್ವತಧರ್ಮಗೋಪ್ತಾ ಸನಾತನಸ್ತ್ವಂ ಪುರುಷೋ ಮತೋ ಮೇ ॥೧೮॥

ತ್ವಮ್ ಅಕ್ಷರಮ್ ಪರಮಮ್ ವೇದಿತವ್ಯಮ್ ತ್ವಮಸ್ಯ ವಿಶ್ವಸ್ಯ ಪರಮ್ ನಿಧಾನಮ್ ।

ತ್ವಮ್ ಅವ್ಯಯಃ ಶಾಶ್ವತ ಧರ್ಮಗೋಪ್ತಾ ಸನಾತನಃ ತ್ವಮ್ ಪುರುಷಃ ಮತಃ ಮೇ – ನೀನು ಅಳಿವಿರದವನು. ಅರಿಯಬೇಕಾದ ಹಿರಿಯ ತತ್ವ. ನೀನು ಈ ಜಗಕೆಲ್ಲ ಹಿರಿಯಾಸರೆ. ನೀನು ಬದಲಾಗದವನು. ಸನಾತನಧರ್ಮವನ್ನು ಸಲಹುವವನು. ನೀನು ಪುರಾಣ ಪುರುಷೋತ್ತಮ ಎಂದು ಗೊತ್ತು ನನಗೆ.

“ನೀನು ಅಕ್ಷರಂ ಪರಮಂ” ಎನ್ನುತ್ತಾನೆ ಅರ್ಜುನ. ಇಲ್ಲಿ ಅಕ್ಷರ ಎಂದರೆ ಸರ್ವ ವ್ಯಾಪ್ತ, ನಾಶವಿಲ್ಲದ ತತ್ವ, ಸರ್ವಾಭೀಷ್ಟಪ್ರದ, ಸರ್ವಶಬ್ದವಾಚ್ಯ ಇತ್ಯಾದಿ. ನಾವು ತಿಳಿದುಕೊಳ್ಳಬೇಕಾಗಿರುವುದರಲ್ಲೇ ಸರ್ವಶ್ರೇಷ್ಠವಾದದ್ದು- ಭಗವಂತ. ಅರ್ಜುನ ಹೇಳುತ್ತಾನೆ “ನೀನು ಇಡೀ ಜಗತ್ತಿನ ಸೃಷ್ಟಾರ, ಆಶ್ರಯದಾತ. ಸಮಸ್ತ ಜಗತ್ತಿನ ಮೂಲಾಶ್ರಯ. ಅನಾಧಿ ಅನಂತ ಕಾಲದಲ್ಲಿ ಶಾಶ್ವತ ಧರ್ಮವನ್ನು ರಕ್ಷಣೆ ಮಾಡುವವನು ನೀನು. ಸಮಸ್ತ ವೇದ ಪ್ರತಿಪಾದ್ಯ ನೀನು ಎನ್ನುವುದು ನನಗೆ ಮನವರಿಕೆಯಾಯಿತು” ಎಂದು. [ಈ ಶ್ಲೋಕದಲ್ಲಿ ಬಂದಿರುವ ಹಲವು ವಿಶೇಷ ಪದಗಳ(ಅಕ್ಷರಃ, ಪುರುಷಃ, ಅವ್ಯಯಃ, ಶಾಶ್ವತಧರ್ಮ, ಇತ್ಯಾದಿ)ವಿಶೇಷ ಅರ್ಥವನ್ನು ನಾವು ಈ ಹಿಂದಿನ ಅಧ್ಯಾಯಗಳಲ್ಲಿ ವಿಶ್ಲೇಷಿಸಿರುವುದರಿಂದ ಇಲ್ಲಿ ಆ ವಿವರಣೆಯನ್ನು ಕೊಟ್ಟಿಲ್ಲ].

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *