ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 11

ಶ್ಲೋಕ – 24

ನಭಃಸ್ಪೃಶಂ ದೀಪ್ತಮನೇಕವರ್ಣಂ ವ್ಯಾತ್ತಾನನಂ ದೀಪ್ತವಿಶಾಲನೇತ್ರಮ್ ।
ದೃಷ್ಟ್ವಾ ಹಿ ತ್ವಾಂ ಪ್ರವ್ಯಥಿತಾಂತರಾತ್ಮಾ ಧೃತಿಂ ನ ವಿಂದಾಮಿ ಶಮಂ ಚ ವಿಷ್ಣೋ ॥೨೪॥

ನಭಃಸ್ಪೃಶಮ್ ದೀಪ್ತಮ್ ಅನೇಕ ವರ್ಣಮ್ ವ್ಯಾತ್ತ ಆನನಮ್ ದೀಪ್ತ ವಿಶಾಲ ನೇತ್ರಮ್ ।

ದೃಷ್ಟ್ವಾ ಹಿ ತ್ವಾಂ ಪ್ರವ್ಯಥಿತ ಅಂತಃ ಆತ್ಮಾ ಧೃತಿಮ್ ನ ವಿಂದಾಮಿ ಶಮಮ್ ಚ ವಿಷ್ಣೋ – ಮುಗಿಲ ಮುತ್ತಿಟ್ಟ, ಹೊಳೆವ ಬಗೆಬಗೆಯ ಬಣ್ಣಗಳು. ತೆರೆದ ಬಾಯಿಗಳು. ಹೊಳೆವಗಲ ಕಣ್ಣುಗಳು. ಇಂಥ ನಿನ್ನನ್ನು ಕಂಡು ಬಗೆ ಬೆಚ್ಚಿಬಿದ್ದಿದೆ. ಓ ಒಳಗು ಹೊರಗೂ ತುಂಬಿ ನಿಂತವನೆ, ನಾನು ಸೈರಿಸಲಾರೆ. ನಾನು ನೆಮ್ಮದಿಗಾಣೆ.

ಭೂಮಿ ಆಕಾಶದಲ್ಲಿ ವ್ಯಾಪಿಸಿರುವ ನಿನ್ನ ಅನಂತ ರೂಪ-ಕತ್ತಲೆಯ ಸ್ಪರ್ಶವೇ ಇಲ್ಲದ ಬೆಳಕಿನ ಪುಂಜ. ನಿನ್ನೊಳಗೆ ಅನೇಕರು ಅನೇಕ ಶ್ರುತಿ ವಚನಗಳಿಂದ, ವೇದಗಳಿಂದ ನಿನ್ನನ್ನು ವರ್ಣಿಸುತ್ತಿದ್ದಾರೆ. ನಿನ್ನ ಅಪ್ರಾಕೃತವಾದ ಬಣ್ಣವನ್ನು ನಾನು ಕಾಣುತ್ತಿದ್ದೇನೆ. ನಿನ್ನ ಅನುಗ್ರಹ ಬೀರುವ, ಕಾರುಣ್ಯದ ಅರಳುಗಣ್ಣುಗಳನ್ನು ನಾನು ಕಂಡೆ. ಎಲ್ಲವನ್ನು ನೋಡಿ ಮನಸ್ಸು ಗೊಂದಲವಾಗುತ್ತಿದೆ. “ಓ ವಿಷ್ಣೋ, ಈ ನಿನ್ನ ವಿಚಿತ್ರ ರೂಪವನ್ನು ಅರ್ಥ ಮಾಡಿಕೊಳ್ಳಲಾಗುತ್ತಿಲ್ಲ” ಎನ್ನುತ್ತಾನೆ ಅರ್ಜುನ. [ವಿಷ್ಣು ಅನ್ನುವ ಪದದ ವಿಶಿಷ್ಟವಾದ ಅರ್ಥವನ್ನು ನಾವು ಹಿಂದಿನ ಅಧ್ಯಾಯದಲ್ಲಿ ವಿಶ್ಲೇಸಿದ್ದೇವೆ]

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *