ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 11

ಶ್ಲೋಕ – 30

ಲೇಲಿಹ್ಯಸೇ ಗ್ರಸಮಾನಃ ಸಮಂತಾತ್ ಲೋಕಾನ್ ಸಮಗ್ರಾನ್ ವದನೈರ್ಜ್ವಲದ್ಭಿಃ ।
ತೇಜೋಭಿರಾಪೂರ್ಯ ಜಗತ್ ಸಮಗ್ರಂ ಭಾಸಸ್ತವೋಗ್ರಾಃ ಪ್ರತಪಂತಿ ವಿಷ್ಣೋ ॥೩೦॥

ಲೇಲಿಹ್ಯಸೇ ಗ್ರಸಮಾನಃ ಸಮಂತಾತ್ ಲೋಕಾನ್ ಸಮಗ್ರಾನ್ ವದನೈಃ ಜ್ವಲದ್ಭಿಃ ।

ತೇಜೋಭಿಃ ಆಪೂರ್ಯ ಜಗತ್ ಸಮಗ್ರಮ್ ಭಾಸಃ ತವ ಉಗ್ರಾಃ ಪ್ರತಪಂತಿ ವಿಷ್ಣೋ –ಓ ಎಲ್ಲೆಲ್ಲು ತುಂಬಿರುವವನೆ, ಬೆಂಕಿ ಕಾರುವ ಬಾಯಿಗಳಿಂದ ಎಲ್ಲ ಲೋಕಗಳನ್ನು ಎಲ್ಲೆಡೆಯು ನುಂಗಿ ನೊಣೆಯುತ್ತಿರುವೆ. ಕೋರೈಸುವ ನಿನ್ನ ಮೈಯ ಹೊಳಪು ಇಡಿಯ ವಿಶ್ವವನ್ನು ಝಳದಿಂದ ತುಂಬಿ ಸುಡುತ್ತಿವೆ.

ಎಲ್ಲವನ್ನು ನಿನ್ನ ನಾಲಿಗೆಯಿಂದ ಸವರಿ ನುಂಗುತ್ತಿದ್ದೀಯ, ಎಲ್ಲವೂ ನಿನ್ನ ಹೊಟ್ಟೆಯನ್ನು ಸೇರುತ್ತಿವೆ. ಈ ಜಗತ್ತೇ ನಿನಗೊಂದು ತುತ್ತಾಗುತ್ತಿದೆ. ಆ ನಿನ್ನ ಮೈಯ ತೇಜಸ್ಸು ಜಗತ್ತಿನೆಲ್ಲೆಡೆಗೆ ತುಂಬುತ್ತಿದೆ. ಎಲ್ಲರ ಒಳಗೂ ಹೊರಗೂ ತುಂಬಿರುವ ನೀನು ಸರ್ವ ಸಂಹಾರಕರನಾಗಿ ಕಾಣುತ್ತಿದ್ದೀಯ(ವಿಷ್ಣೋ).

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *