ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 11

ಶ್ಲೋಕ – 04

ಮನ್ಯಸೇ ಯದಿ ತಚ್ಛಕ್ಯಂ ಮಯಾ ದ್ರಷ್ಟುಮಿತಿ ಪ್ರಭೋ ।
ಯೋಗೇಶ್ವರ ತತೋ ಮೇ ತ್ವಂ ದರ್ಶಯಾSತ್ಮಾನಮವ್ಯಯಮ್ ॥೪॥

ಮನ್ಯಸೇ ಯದಿ ತತ್ ಶಕ್ಯಮ್ ಮಯಾ ದ್ರಷ್ಟುಮ್ ಇತಿ ಪ್ರಭೋ ।

ಯೋಗೇಶ್ವರ ತತಃ ಮೇ ತ್ವಮ್ ದರ್ಶಯ ಆತ್ಮಾನಮ್ ಅವ್ಯಯಮ್ –ಜಗದೊಡೆಯನೆ, ಯೋಗಿಗಳೊಡೆಯನೆ, ಅದು ನನ್ನಿಂದ ಕಾಣಲು ಸಾಧ್ಯವೆಂದು ನೀನು ಭಾವಿಸುವುದಾದರೆ, ನಿನ್ನ ಅಳಿವಿರದ ರೂಪವನ್ನು ನನಗೆ ತೋರಿಸು.

ಅರ್ಜುನ ಮುಂದುವರಿದು ಹೇಳುತ್ತಾನೆ” “ನಾನು ಆ ನಿನ್ನ ರೂಪವನ್ನು ನೋಡಲು ಸಾಧ್ಯ ಎಂದು ನೀನು ಭಾವಿಸುವುದಾದರೆ, ನಿನ್ನ ರೂಪವನ್ನು ನನಗೆ ತೋರಿಸು” ಎಂದು. ಇಲ್ಲಿ ಅರ್ಜುನ ಕೃಷ್ಣನನ್ನು ‘ಪ್ರಭೋ’ ಎಂದು ಸಂಬೋಧಿಸಿದ್ದಾನೆ. “ಪ್ರಭು’ ಅಂದರೆ ಸಾಮರ್ಥ್ಯ. “ನೋಡುವ ಸಾಮರ್ಥ್ಯ ನನಗಿಲ್ಲದಿದ್ದರೂ, ಆ ಸಾಮರ್ಥ್ಯವನ್ನು ಕರುಣಿಸಿ ತೋರಿಸುವ ಸಾಮರ್ಥ್ಯ ನಿನಗಿದೆ” ಎನ್ನುವುದು ಈ ಸಂಬೋಧನೆಯ ಹಿಂದಿರುವ ಭಾವ. “ಏಕೆಂದರೆ ನೀನು ಯೋಗೇಶ್ವರಃ” ಎನ್ನುತ್ತಾನೆ ಅರ್ಜುನ. ಯೋಗ ಅಂದರೆ ಉಪಾಯ. “ನನಗೆ ಹೇಗೆ ನಿನ್ನ ರೂಪವನ್ನು ತೋರಿಸಬೇಕು ಎನ್ನುವ ಉಪಾಯ ಕೂಡ ನಿನಗೆ ತಿಳಿದಿದೆ. ನೀನು ಎಲ್ಲ ಉಪಾಯ(ಯೋಗ)ಗಳ ಸ್ವಾಮಿ. ಆದ್ದರಿಂದ ಅಳಿವಿರದ, ನಿತ್ಯವಾಗಿರುವ ಆ ನಿನ್ನ ರೂಪವನ್ನು ನನಗೆ ತೋರಿಸು” ಎಂದು ಅರ್ಜುನ ಕೃಷ್ಣನನ್ನು ಕೇಳಿಕೊಳ್ಳುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *