Wednesday , 24 April 2024
R-S-Rajaram

ಆರ್ ಎಸ್‌ ರಾಜಾರಾಂ

ರಂಗಭೂಮಿಯ ಪ್ರಖ್ಯಾತ ಕಲಾವಿದರಾದ ರಾಜಾರಾಂ ರವರು ಹುಟ್ಟಿದ್ದು ಕೋಲಾರ ಜಿಲ್ಲೆಯ ಕೆ.ಜಿ.ಎಫ್‌ ನಲ್ಲಿ. ತಂದೆ ಜಿ.ಎಸ್‌. ರಘುನಾಥರಾವ್‌, ತಾಯಿ ಶಾರದಾಬಾಯಿ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗಕ್ಕೆ ಸೇರಿ ಅಧೀನ ಕಾರ್ಯದರ್ಶಿ ಹುದ್ದೆಗೇರಿ ನಿವೃತ್ತಿ.

ಮಲ್ಲೇಶ್ವರದ ಸ್ನೇಹಿತರೊಡನೆ ಸೇರಿ ಕಟ್ಟಿದ ‘ರಸಿಕ ರಂಜನಿ ಕಲಾವಿದರು’ ಸಂಸ್ಥಾಪಕರಲ್ಲೊಬ್ಬರು. ಹಣ ಹದ್ದು, ಮಗು ಮದ್ವೆ, ಪಂಚಭೂತ, ಹೋಂರೂಲು, ‘ಅವರೇ ಇವರು- ಇವರೇ ಅವರು’ ಮೊದಲಾದ, ಪರ್ವತವಾಣಿ, ಕೈಲಾಸಂ, ದಾಶರಥಿದೀಕ್ಷಿತ್‌, ಕೆ. ಗುಂಡಣ್ಣನವರ ನಾಟಕಗಳಲ್ಲಿ ಅಭಿನಯ. ಸರಸ್ವತಿ ಕಲಾ ನಿಕೇತನ, ಪ್ರಧಾನ ಮಿತ್ರ ಮಂಡಲಿ, ಸುಪ್ರಭಾತ ಕಲಾವಿದರು, ಕಮಲ ಕಲಾ ಮಂದಿರ ಮುಂತಾದ ಸಂಸ್ಥೆಗಳೊಡನೆ ಒಡನಾಟ.

೧೯೬೪ ರಲ್ಲಿ ಸಚಿವಾಲಯ ಉದ್ಯೋಗಿಗಳೊಡನೆ ಸ್ಥಾಪಿಸಿದ್ದು ಸಚಿವಾಲಯ ಸಾಂಸ್ಕೃತಿಕ ಸಂಘ. ಕೋಲ್ಕತ್ತದಲ್ಲಿ ನಡೆದ ಸಚಿವಾಲಯ ಕ್ಲಬ್‌ ನೌಕರರ ನಾಟಕ ಸ್ಪರ್ಧೆಗಳಲ್ಲಿ ಭಾಗಿ, ಕರ್ನಾಟಕ ಸರಕಾರದ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಂಗೀತ ಮತ್ತು ನಾಟಕ ವಿಭಾಗದ ಅನೇಕ ನಾಟಕಗಳ ನಟ.

೧೯೭೨ರಿಂದ ನಟರಂಗ ಮತ್ತು ೧೯೮೩ರಿಂದ ವೇದಿಕೆಯ ರಂಗ ಚಟುವಟಿಕೆಗಳಲ್ಲಿ ತೊಡಗಿ ಸಿ.ಆರ್. ಸಿಂಹ, ರವರ ನಿರ್ದೇಶನದಲ್ಲಿ ಹಲವಾರು ನಾಟಕಗಳಲ್ಲಿ ಅಭಿನಯಿಸಿ ಪಡೆದ ಖ್ಯಾತಿ. ಬಿ.ವಿ. ಕಾರಂತ, ಎಂ.ಎಸ್‌. ಸತ್ಯು, ಶ್ರೀನಿವಾಸ್‌ ಜಿ. ಕಪ್ಪಣ್ಣ, ಜಯತೀರ್ಥ ಜೋಶಿ, ಸಿ.ಎಚ್‌. ಲೋಕನಾಥ್‌, ಆರ್. ನಾಗೇಶ್‌, ಪ್ರಕಾಶ್‌ ಬೆಳವಾಡಿ ಇವರ ನಿರ್ದೇಶನದ ಮಂಡೋದರಿ, ವಿಗಡವಿಕ್ರಮರಾಯ, ಎಚ್ಚಮನಾಯಕ, ಟಿಪ್ಪುಸುಲ್ತಾನ್‌, ಕಿತ್ತೂರು ಚೆನ್ನಮ್ಮ, ರಕ್ತಾಕ್ಷಿ, ಸದಾರಮೆ, ಕಾಕನ ಕೋಟೆ, ತುಘಲಕ್, ಮೃಚ್ಛಕಟಿಕ, ಸಂಕ್ರಾಂತಿ, ಅಗ್ನಿ ಮತ್ತು ಮಳೆ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ. ಹೈದರಾಬಾದ್‌, ಚೆನ್ನೈ, ಕೋಲ್ಕತ್ತಾ, ಕಾಶ್ಮೀರ ಮುಂಬಯಿ, ಚಂಡಿಗರ್ ಮುಂತಾದೆಡೆ ನಾಟಕ ಪ್ರದರ್ಶನದಲ್ಲಿ ಭಾಗಿ.

ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, ಮಯೂರ ಕಲಾರಂಗ, ಕರ್ನಾಟಕ ನಾಟಕ ಅಕಾಡೆಮಿ ಮುಂತಾದುವುಗಳಿಂದ ಸಂದ ಗೌರವ ಪ್ರಶಸ್ತಿ.

ಮಾಹಿತಿ ಕೃಪೆ: ಕಣಜ

ಇವುಗಳೂ ನಿಮಗಿಷ್ಟವಾಗಬಹುದು

A V Prakasha

ಎ.ವಿ. ಪ್ರಕಾಶ್‌

ಎ.ವಿ. ಪ್ರಕಾಶ್‌ (೧೫.೧೦.೧೯೪೫): ಪ್ರಖ್ಯಾತ ಕೊಳಲುವಾದಕರಾದ ಎ.ವಿ. ಪ್ರಕಾಶ್‌ರವರು ಹುಟ್ಟಿದ್ದು ಬೆಂಗಳೂರು. ತಂದೆ ಪ್ರಖ್ಯಾತ ಪಿಟೀಲು ವಿದ್ವಾಂಸರಾದ ಎ.ಕೆ. ವೆಂಕಟನಾರಾಯಣ, …

Leave a Reply

Your email address will not be published. Required fields are marked *