S Nanjunda Swamy

ಎಸ್. ನಂಜುಂಡಸ್ವಾಮಿ

ಎಸ್. ನಂಜುಂಡಸ್ವಾಮಿ (೨೬-೩-೧೯೦೬ – ೨೭-೧೨-೧೯೬೯): ವರ್ಣಚಿತ್ರ, ಶಿಲ್ಪಕಲೆಯಲ್ಲಿ ಅಗ್ರಗಣ್ಯರೆನಿಸಿದ್ದ ಎಸ್.ಎನ್. ಸ್ವಾಮಿಯವರು ಹುಟ್ಟಿದ್ದು ಈಗಿನ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಯರಗಂಬಳ್ಳಿ. ತಂದೆ ಶಿಲ್ಪ ಸಿದ್ಧಾಂತಿ ವೀರತ್ತಸ್ವಾಮಿಗಳು, ಶಿಲ್ಪಕಲೆ ಮತ್ತು ಚಿತ್ರಕಲೆ ವಂಶಪಾರಂಪರ್ಯವಾಗಿ ಬಂದ ವಿದ್ಯೆ. ಮೈಸೂರಿನ ಶ್ರೀ ಜಯಚಾಮರಾಜೇಂದ್ರ ವೃತ್ತಿ ಶಿಕ್ಷಣ ಶಾಲೆಯಲ್ಲಿ ಚಿತ್ರಾಭ್ಯಾಸ, ಮುಂಬಯಿ ಜೆ.ಜೆ. ಕಲಾಶಾಲೆಯಿಂದ ಹೆಚ್ಚಿನ ವಿದ್ಯಾಭ್ಯಾಸ. ಜಯಚಾಮರಾಜೇಂದ್ರ ಕಲಾಶಾಲೆಯಲ್ಲಿ ಅಧ್ಯಾಪಕ ವೃತ್ತಿ.

ರೇಖಾಚಿತ್ರ, ತೈಲಚಿತ್ರ, ವರ್ಣಚಿತ್ರಗಳಲ್ಲಿ ಸಾಧಿಸಿದ ಅದ್ವಿತೀಯ ಸಾಧನೆ. ಪ್ರಕೃತಿ ಚಿತ್ರಗಳು, ಭೂ ದೃಶ್ಯಗಳಲ್ಲಿ ನೆರಳು-ಬೆಳಕಿನಾಟಗಳ ಸೌಂದರ್ಯವನ್ನು ಯಥಾವತ್ ಚಿತ್ರಿಸುವ ಕಲೆ ಕರಗತ, ಸಂಯೋಜನೆಯಲ್ಲಿ ತಮ್ಮದೇ ಆದ ತತ್ತ್ವ.

ಮೈಸೂರು ವಾಣಿ ವಿಲಾಸ ಮೊಹಲ್ಲದಲ್ಲಿರುವ ಮಹಾರಾಜ ಹೈಸ್ಕೂಲಿನ ಭಿತ್ತಿಯೊಂದರ ಮೇಲೆ ರಚಿತವಾಗಿರುವ ಶಾರದಾದೇವಿ ಚಿತ್ರ, ಕಬೀರ್ ತನ್ನ ಹೆಂಡತಿಯನ್ನು ಹೆಗಲ ಮೇಲೆ ಹೊತ್ತೊಯ್ಯುವ ದೃಶ್ಯ, ವೃತ್ತಿ ಶಿಕ್ಷಣ ಶಾಲೆಯಲ್ಲಿ ರಾಜರ ಒಡ್ಡೋಲಗದ ದೃಶ್ಯಗಳು ಕಲಾವಂತಿಕೆಯ ನಿದರ್ಶನಗಳು.
ಹಲವಾರು ಭಾವಚಿತ್ರಗಳ ರಚನೆಯಲ್ಲೂ ಅದ್ವಿತೀಯ ಸಾಧನೆ. ಮೈಸೂರಿನ ವಸ್ತುಪ್ರದರ್ಶನ ಶಾಲೆಯ ಮೇಲೆ ರಚಿಸಲ್ಪಟ್ಟ ಜಯಚಾಮರಾಜ ಒಡೆಯರ ಚಿತ್ರ.
ರಾಮಾಯಣ, ಮಹಾಭಾರತ, ಭಾಗವತ ಮುಂತಾದ ಕಥೆಗಳನ್ನು ಓದುವುದು, ಕೇಳುವುದು, ಕತೆ ಕೇಳಿದ ನಂತರ ಚಿತ್ರ ರಚನೆ. ಪ್ರಖ್ಯಾತ ಚಿತ್ರಗಳೆಂದರೆ ಅಶೋಕ ವನದಲ್ಲಿ ಸೀತಾದೇವಿ ರಾವಣನ ಕೈಸೆರೆಯಾಗಿದ್ದು ಮತ್ತು ಮಾಯಾಜಿಂಕೆಗೆ ಮೋಹಗೊಂಡ ಸೀತೆ, ರಾಮನಲ್ಲಿ ತನ್ನ ಅಭೀಪ್ಸೆಯನ್ನು ವ್ಯಕ್ತಪಡಿಸುತ್ತಿರುವುದು.

ಆಡಂಬರವಿಲ್ಲದ ಜೀವನ. ನಿವೃತ್ತಿಯ ನಂತರ ಒಂಟಿಕೊಪ್ಪಲಿನಲ್ಲಿದ್ದ ಮನೆಮಾರಿ ಹುಟ್ಟೂರಾದ ಯರಗಂಬಳ್ಳಿಗೆ. ಪುನಃ ವಾಪಸ್ಸು ಮೈಸೂರಿಗೆ. ಚಿತ್ರಕಲೆ ಬೇಸರವಾದಾಗ ಗಂಧದ ಮತ್ತು ದಂತದಲ್ಲಿ ಮೂರ್ತಿಗಳ ಕೆತ್ತನೆ. ಬೇಲೂರಿನ ಶಿಲಾಬಾಲಿಕೆಯರಿಂದ ಸ್ಫೂರ್ತಿ. ಸಂದ ಗೌರವ, ಕರ್ನಾಟಕ ಲಲಿತಕಲಾ ಅಕಾಡಮಿ ಪ್ರಶಸ್ತಿ, ಚಾಮುಂಡೇಶ್ವರಿ ಶಿಲಾ ವಿಗ್ರಹವನ್ನು ಕಡೆಯುತ್ತಿದ್ದಾಗ ನಿಧನರಾದರು.
ಲೇಖಕರು: ವೈ.ಎನ್. ಗುಂಡೂರಾವ್‌
ಕಣಜ

ಶ್ರೇಯಾಂಕ

ಕನ್ನಡ ಭೂಮಿಯನ್ನು ಚಿನ್ನದ ಭೂಮಿಯನ್ನಾಗಿ ಮಾಡಿದ ಧೀಮಂತ ವ್ಯಕ್ತಿಗಳಿಗೆ ನಮ್ಮ ನಮನಗಳು.

User Rating: 4.9 ( 1 votes)

ಇವುಗಳೂ ನಿಮಗಿಷ್ಟವಾಗಬಹುದು

A V Prakasha

ಎ.ವಿ. ಪ್ರಕಾಶ್‌

ಎ.ವಿ. ಪ್ರಕಾಶ್‌ (೧೫.೧೦.೧೯೪೫): ಪ್ರಖ್ಯಾತ ಕೊಳಲುವಾದಕರಾದ ಎ.ವಿ. ಪ್ರಕಾಶ್‌ರವರು ಹುಟ್ಟಿದ್ದು ಬೆಂಗಳೂರು. ತಂದೆ ಪ್ರಖ್ಯಾತ ಪಿಟೀಲು ವಿದ್ವಾಂಸರಾದ ಎ.ಕೆ. ವೆಂಕಟನಾರಾಯಣ, …

Leave a Reply

Your email address will not be published. Required fields are marked *