ಭರತನ ಪ್ರತಿಮೆ. ಬಾಹುಬಲಿಯ ಪ್ರತಿಮೆ (ಹಿ೦ಬದಿಯಲ್ಲಿ ).

ಬಾಹುಬಲಿ

ಬಾಹುಬಲಿ ಅಥವಾ ಗೊಮ್ಮಟೇಶ್ವರ, ಜೈನ ಧರ್ಮದಲ್ಲಿ ಮೂಡಿ ಬರುವ ಪ್ರಸಿದ್ಧ ಹೆಸರು. ಶ್ರವಣ ಬೆಳಗೊಳದಲ್ಲಿ ಚಾಮುಂಡರಾಯ ಕೆತ್ತಿಸಿದ ೫೮ ಅಡಿ ಎತ್ತರದ ಏಕಶಿಲಾ ಬಾಹುಬಲಿ ಪ್ರತಿಮೆ ಇರುವುದು. ಸುಮಾರು ೧೨ ವರ್ಷಗಳಿಗೊಮ್ಮೆ ಈ ಪ್ರತಿಮೆಗೆ ಮಹಾ ಮಸ್ತಕಾಭಿಷೇಕವನ್ನು ನೆರವೇರಿಸಲಾಗುತ್ತದೆ.

ಕಥೆ

Gomateshwara-side
ಗೊಮ್ಮಟೇಶ್ವರ

ಜೈನ ಧರ್ಮವನ್ನು ಉಪದೇಶಿಸಿದ ಮೊದಲನೆಯ ತೀರ್ಧ೦ಕರರು ವೃಷಭನಾಥರು. ಇವರಗೆ ಸುನಂದ ಮತ್ತು ನಂದಾ ಯೆಂಬ ಇಬ್ಬರು ಪತ್ನಿಯರು.ಇವರಿಂದ ನೂರುಜನ ಗಂಡು ಮಕ್ಕಳೂ ಮತ್ತು ಇಬ್ಬರು ಹೆಣ್ಣು ಮಕ್ಕಳೂ ಜನಿಸಿದರು.ಬಾಹುಬಲಿಯು ಸುನಂದೆಯ ಮಗ.ವೃಷಭನಾಥರಿಗೆ ವೈರಾಗ್ಯ ಉ೦ಟಾದಾಗ ಮಕ್ಕಳಿಗೆ ರಾಜ್ಯವನ್ನು ಹಂಚಿ ತಪಸ್ಸಿಗೆ ತೆರಳಿದರು. ಸಕಲ ಕರ್ಮಗಳನ್ನು ಜಯಿಸಿ ಕೇವಲಜ್ಞಾನವನ್ನು ಪಡೆದು ಜನರಿಗೆ ಮುಕ್ತಿ ಮಾರ್ಗವನ್ನು ಉಪದೇಶಿಸುತ್ತಿದ್ದರು.

ಪ್ರಥಮ ಪುತ್ರನಾದ ಭರತನು ದಿಗ್ವಿಜಯವನ್ನು ಮುಗಿಸಿಬರುವಾಗ ಆತನ ಚಕ್ರರತ್ನವು ಪುರ ಪ್ರವೇಶ ಮಾಡಲಿಲ್ಲ. ಭರತನು ತನ್ನ ತಮ್ಮ೦ದಿರನ್ನು ಜಯಿಸಿಲ್ಲವೆ೦ದು ಪುರೊಹಿತರು ಹೇಳಿದರು. ಕಾಣಿಕೆಗಳೊಡನೆ ಬರುವ೦ತೆ ತಮ್ಮ೦ದಿರಿಗೆ ಹೇಳಿಕಳಿಸಿದಾಗ ಬಾಹುಬಲಿಯನ್ನುಳಿದು ಇತರರು ವೃಷಭನಾಥರ ಬಳಿ ಹೋಗಿ ದೀಕ್ಷೆ ಪಡೆದರು.

ಬಾಹುಬಲಿಯು ತ೦ದೆಯ ಹೊರೆತು ಇನ್ನಾರಿಗೂ ತಲೆ ಬಾಗುವುದಿಲ್ಲವೆ೦ದು, ತ೦ದೆಯಿ೦ದ ತನಗೆ ದೊರೆತ ರಾಜ್ಯವನ್ನು ಕೊಡುವುದಿಲ್ಲವೆ೦ದೂ, ಇದಕ್ಕಾಗಿ ಯುದ್ಧಕ್ಕೆ ಸಹ ಸಿದ್ಧನೆ೦ದು ಭರತನ ದೂತರಿಗೆ ಹೇಳಿದನು. ಭರತನು ಈ ಸುದ್ದಿಯನ್ನು ಕೇಳಿ ಯುದ್ಧಕ್ಕೆ ಸಿದ್ಧನಾದನು. ಎರಡೂ ಸ್ಯೆನ್ಯಗಳು ಯುದ್ಧ ಪ್ರಾರ೦ಭಿಸುವ ಮು೦ಚೆ ಮ೦ತ್ರಿಗಳು ಯೋಚಿಸಿ ಭರತ, ಬಾಹುಬಲಿ ಇಬ್ಬರೂ ವಜ್ರದೇಹಿಗಳಾಗಿರುವುದರಿ೦ದ ವೃಥಾ ಸ್ಯೆನ್ಯ ನಾಶವಾಗುವುದಲ್ಲದೆ ಈ ಇಬ್ಬರಿಗೂ ಏನೂ ಆಗುವುದಿಲ್ಲ. ಆದ್ದರಿ೦ದ ಈ ಇಬ್ಬರ ಮಧ್ಯೆಯೆ ದೃಷ್ಟಿಯುದ್ಧ, ಜಲಯುದ್ಧ ಮತ್ತು ಮಲ್ಲಯುದ್ಧ ನಡೆಯಲಿ ಎ೦ದು ತೀರ್ಮಾನಿಸಿದರು.

ಕಣ್ಣ ರೆಪ್ಪೆಯಾಡಿಸದೆ ಒಬ್ಬರನ್ನೊಬ್ಬರು ನೋಡುವುದು ದೃಷ್ಟಿಯುದ್ಧ. ಒಬ್ಬರಿಗೊಬ್ಬರು ಮುಖಕ್ಕೆ ತಾಗುವ೦ತೆ ನೀರೆರೆಚುವುದು ಜಲಯುದ್ಧ. ಪರಸ್ಪರ ಬಾಹು ಯುದ್ಧ ಜಟ್ಟಿಕಾಳಗ ವಾಡುವುದು ಮಲ್ಲಯುದ್ಧ. ಈ ಮೂರೂ ಯುದ್ಧಗಳಲ್ಲಿ ಅಪ್ರತಿಮ ವೀರನಾದ ಬಾಹುಬಲಿಯೇ ಗೆದ್ದನು. ಅಣ್ಣ ಭರತನನ್ನು ಮಲ್ಲಯುದ್ಧದಲ್ಲಿ ಮೇಲೆತ್ತಿದ ಬಾಹುಬಲಿಗೆ ತಾನು ಹೀಗೆ ಮಾಡಬಾರದೆ೦ದೆನಿಸಿ ನಿಧಾನವಾಗಿ ಕೆಳಗಿಳಿಸಿದನು. ಅವಮಾನ ಹೊ೦ದಿದ ಭರತನು ತನ್ನ ಚಕ್ರವನ್ನು ಪ್ರಯೋಗಿಸಿದರೂ ಸಹ ಅದು ಬಾಹುಬಲಿಯ ಪ್ರದಕ್ಷಿಣೆ ಮಾಡಿ ಅವನ ಬಲಗಡೆನಿ೦ತಿತು.

ಬಾಹುಬಲಿ ವಿಜಯಿಯಾದನು. ಎಲ್ಲರೂ ಜಯಕಾರ ಮಾಡಿದರು. ಆದರೆ ಬಾಹುಬಲಿಗೆ ವೈರಾಗ್ಯ ಉ೦ಟಾಗಿ ರಾಜ್ಯವನ್ನು ತೊರೆದು ತ೦ದೆ ವೃಷಭನಾಥರ ಬಳಿ ದೀಕ್ಷೆಯನ್ನು ಪಡೆದು ತಪಸ್ಸಿಗೆ ತೊಡಗಿದನು.

ಬಹುಕಾಲ ತಪಸ್ಸು ಆಚರಿಸಿದರೂ ಕೇವಲಜ್ಞಾನವನ್ನು ಪಡೆಯಲಿಲ್ಲ. ಇದಕ್ಕೆ ತಾನು ಅಣ್ಣನ ಭೂಮಿಯಲ್ಲಿ ನಿ೦ತಿರುವೆನೆ೦ಬ ಚಿ೦ತೆಯೇ ಕಾರಣವಾಗಿತ್ತು. ಇದನ್ನು ತಿಳಿದ ನ೦ತರ ಭರತನು ಬ೦ದು ಈ ಭೂಮಿಯನ್ನು ನೀನು ಗೆದ್ದು ನನಗೆ ಕೊಟ್ಟಿರುವೆ ಆದ್ದರಿ೦ದ ಮನದಲ್ಲಿ ಈ ಭಾವನೆ ತೊರೆದು ಬಿಡು ಎ೦ದು ಬೇಡಿದನು.

ನ೦ತರ ಬಾಹುಬಲಿಯು ನಿರ್ಮಲವಾದ ಮನದಿ೦ದ ತಪಸ್ಸನ್ನು ಮಾಡಿ ಕೇವಲಜ್ಞಾನ ಪಡೆದನು.

ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಬಾಹುಬಲಿಯ ಬೃಹತ್ ವಿಗ್ರಹಗಳು ಕಾಣ ಸಿಗುತ್ತದೆ. ಶ್ರವಣಬೆಳಗೊಳ, ಧರ್ಮಸ್ಥಳ, ವೇಣೂರು, ಕಾರ್ಕಳ, ಮೈಸೂರು ಬಳಿಯ ಗೋಮಟಗಿರಿಯಲ್ಲಿ ಬಾಹುಬಲಿಯ ಬೃಹತ್ ವಿಗ್ರಹಗಳಿವೆ. ಪ್ರತಿಯೊಂದಕ್ಕೂ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನೆರವೇರುತ್ತದೆ. ಆದರೆ ಉಳಿದೆಲ್ಲ ವಿಗ್ರಹಗಳಿಗೆ ಹೋಲಿಸಿದರೆ ಚಿಕ್ಕದಾಗಿರುವ ಗೋಮಟಗಿರಿಯ ಬಾಹುಬಲಿ ಸ್ವಾಮಿಗೆ ಪ್ರತಿ ವರ್ಷವೂ ಮಸ್ತಕಾಭಿಷೇಕ ನಡೆ

ಇವುಗಳೂ ನಿಮಗಿಷ್ಟವಾಗಬಹುದು

ರಚನಾತ್ಮಕ ಜೀವನದ ಅಭಿವೃದ್ಧಿಮಾದರಿ ಹರಿಕಾರ ಬಸವಣ್ಣ

12 ನೇ ಶತಮಾನದಲ್ಲಿ ಬಸವಾದಿ ಶರಣರ ಆಂದೋಲನದ ಇತಿಹಾಸದ ಪುಟಗಳನ್ನು ತಿರುವಿಹಾಕಲು ಅಂತ್ಯದಲ್ಲಿ ನಡೆದ ರಕ್ತಕ್ರಾಂತಿಯ ಕರಾಳ ಅಧ್ಯಾಯ ಬದಿಗಿರಿಸಿದರೆ ಕಲಿಯುಗದಲ್ಲಿ …

Leave a Reply

Your email address will not be published. Required fields are marked *