ಪ್ರತಿ ಸಂವತ್ಸರದಲ್ಲಿ.. ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿ ಯಂದು… ರಾತ್ರಿ ಸಮಯದಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಗೆ ಬರುತ್ತಾನೆ.. ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣ ಗೊಳ್ಳುತ್ತಾನೆ.. ಆ ಸಮಯದಲ್ಲಿ ಅಂದ್ರೆ ಶಿವರಾತ್ರಿ ರಾತ್ರಿ ವೇಳೆಯಲ್ಲಿತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಯೂ ಇದೆ.
ಸ್ಕಂದ ಪುರಾಣ ದಲ್ಲಿ ಶಿವರಾತ್ರಿ ಹಬ್ಬದ ಬಗ್ಗೆ ಉಲ್ಲೇಖವಿದೆ.. ಶಿವರಾತ್ರಿಯು ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ… ಆದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ, ಮಂಗಳಕರ ನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು ಕಾಣಬಹುದು.. ಈ ಪರ್ವಕಾಲವು ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು ಶಿವನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆಯುತ್ತಾನೆ ಎಂಬ ಪ್ರತೀತಿ ಇದೆ..
ತ್ರಯೋದಶಿಯು ಶಕ್ತಿರೂಪವಾದರೆ,, ಚತುರ್ದಶಿಯು ಶಿವರೂಪ. ತ್ರಯೋದಶಿಯುಚತುರ್ದಶಿಯಲ್ಲಿ ಅಂತರ್ಗತ ವಾಗಿದ್ದರೆ ಅದು ಶಿವಶಕ್ತಿಯೋಗ ವಾಗುತ್ತದೆ. ಅದೆಶಿವರಾತ್ರಿಯ ಸಮಯವೆಂದು ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು ಪ್ರತೀತಿ ಇದೆ.
‘ ಶಿವ ಪುರಾಣ ‘ ದಲ್ಲಿ ಬರುವ ಬೇಡರಕಣ್ಣಪ್ಪನ ಕಥೆ….., ‘ ಸ್ಕಂದ ಪುರಾಣ ‘ದ ಬೇಡ ಚಂದನನ ಕಥೆ…, ‘ ಗರುಡ ಮತ್ತು ಅಗ್ನಿ ಪುರಾಣ’ ಗಳ ಬೇಡ ಸುಂದರ ಸೇನನ ಕಥೆ… ಈ ಎಲ್ಲ ಕಥೆಗಳಲ್ಲೂ ಒಂದು ವಿಶೆಷವಾದ ಸಾಮ್ಯತೆಯನ್ನು ಕಾಣಬಹುದು.. ಮಹಾಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ ಬಿಲ್ವ ಪತ್ರೆಗಳನ್ನುಅರ್ಪಿಸಿದ್ದರಿಂದ ಅವರೆಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು. ಇದು ಶಿವರಾತ್ರಿ ಪೂಜೆಯ ಫಲದ ಮಹಿಮೆಯನ್ನು ಎತ್ತಿ ತೋರಿಸುತ್ತದೆ..
ದೇವತೆಗಳು ಮತ್ತು ಅಸುರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡ್ತಿರಬೇಕಾದ್ರೆ ಮೊದ್ಲು ಮಡಿಕೆ ತುಂಬ ಹಾಲಾಹಲ ಉತ್ಪತ್ತಿಯಾಯಿತು.. ಆದ್ರೆ ದೇವತೆಗಳು… ಅಸುರರು ಯಾರೂ ಆ ಹಾಲಾಹಲವನ್ನು ಕುಡಿಯೋಕೆ ಮುಂದಗಲಿಲ್ಲ.. ಆ ಹಾಲಾಹಲ ಇಡೀ ನಭೋಮಂಡಲವನ್ನೇ ನಾಶಮಾಡಬಲ್ಲ ಸಾಮರ್ಥ್ಯವನ್ನು ಹೊಂದಿತ್ತು.. ಹೀಗಾಗಿ ಲೋಕ ಕಲ್ಯಾಣಕ್ಕಾಗಿ ಪರಶಿವನೇ ಆ ಹಾಲಾಹಲವನ್ನು ಕುಡಿದುಬಿಟ್ಟ.. ಅದೇ ಸಮಯಕ್ಕೆ ಪತ್ನಿ ಪಾರ್ವತಿ ದೇವಿ ಬಂದು ಆ ವಿಷ ಶಿವನ ಹೊಟ್ಟೆ ಸೇರದಂತೆ ಗಂಟಲಲ್ಲೇ ತಡೆ ಹಿಡಿದಳು… ವ್ಯಕ್ತಿಗಳು ನಿದ್ರಿಸುತ್ತಿದ್ದರೆ ವಿಷವು ಬೇಗನೆ ದೇಹದ ತುಂಬ ಹರಡುತ್ತದೆ.. ಹೀಗಾಗಿ ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಶಿವನನ್ನು ಎಚ್ಚರವಿರಿಸಿದರು.. ಹೀಗಾಗಿ ಈ ಪವಿತ್ರ ದಿನವನ್ನು ಶಿವರಾತ್ರಿ ಎಂದು ಆಚರಿಸಲಾಗುತ್ತದೆ