ರಕ್ಷಾ ಬಂಧನ ಹಬ್ಬ: ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುವ ಒಂದು ಹಬ್ಬ. ಆ ದಿನ ಸಹೋದರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.
ಇತಿವೃತ್ತ
ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ‘ ಅಥವಾ ‘ರಾಖಿ‘ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತ ದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನನ್ನ ಮನದಲ್ಲಿ ಮೂಡಿಸುತ್ತದೆ.
ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ
ಶ್ರೇಯಾಂಕ
ಮತ ನೀಡಿ, ಬಲಪಡಿಸಿ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಹಂಚಿರಿ.