ಶ್ಲೋಕ – 10
ಅಪರ್ಯಾಪ್ತಂ ತದಸ್ಮಾಕಂ ಬಲಂ ಭೀಷ್ಮಾಭಿರಕ್ಷಿತಮ್ ।
ಪರ್ಯಾಪ್ತಂ ತ್ವಿದಮೇತೇಷಾಂ ಬಲಂ ಭೀಮಾಭಿರಕ್ಷಿತಮ್ ॥೧೦॥
ಅಪರ್ಯಾಪ್ತಮ್ ತತ್ ಅಸ್ಮಾಕಮ್ ಬಲಮ್ ಭೀಷ್ಮ ಅಭಿರಕ್ಷಿತಮ್ ಪರ್ಯಾಪ್ತಮ್ ತು ಇದಮ್ ಏತೇಷಾಮ್ ಬಲಮ್ ಭೀಮ ಅಭಿರಕ್ಷಿತಮ್-ಭೀಷ್ಮಾಚಾರ್ಯರ ಕಣ್ಗಾಪಿನ ಆ ನಮ್ಮ ಸೇನೆಯ ಸಜ್ಜು ಸಾಲದು. ಭೀಮನ ಕಣ್ ಗಾಪಿನ ಇವರ ಈ ಸೇನೆಯೋ ಸಾಕಷ್ಟು ಸಿದ್ಧಗೊಂಡಿದೆ.
ಇಲ್ಲಿ ದುರ್ಯೋಧನನ ಮಾತಿನ ಪರ್ಯಾವಸಾನ(Conclusion)ವಿದೆ . ಆತ ಹೇಳುತ್ತಾನೆ “ಆ ನಮ್ಮ ಸೈನ್ಯವಿದೆಯಲ್ಲ, ಪಾಂಡವ ಪಕ್ಷಪಾತಿ ಭೀಷ್ಮಾಚಾರ್ಯರ ಮುಂದಾಳತ್ವದಲ್ಲಿನ ಆ ನಮ್ಮ ಸೈನ್ಯ, ಅದು ಭೀಮನ ಕಣ್ಗಾಪಿನ ಈ ಸೈನ್ಯದ ಮುಂದೆ ಸಜ್ಜಾಗಿರುವುದು ಸಾಲದು” ಎಂದು. ಇಲ್ಲಿ ಸೂಕ್ಷ್ಮವಾಗಿ ನೋಡಿದರೆ ಭೀಷ್ಮಾಚಾರ್ಯರು ಕೌರವ ಸೇನಾಧಿಪತಿ. ಆದರೆ ಭೀಮ ಪಾಂಡವ ಸೇನಾಧಿಪತಿ ಅಲ್ಲ. ದುರ್ಯೋಧನನಿಗೆ ಭೀಮನ ಮೇಲೆ ದ್ವೇಷವಿದೆ ಹಾಗು ಭಯವಿದೆ. ಆ ಕಾರಣದಿಂದ ಆತ ಭೀಮನ ಕಣ್ಗಾಪಿನ ಪಾಂಡವ ಸೇನೆ ಎಂದು ಸಂಬೋಧಿಸುತ್ತಾನೆ. ಇನ್ನೂ ಸೂಕ್ಷ್ಮವಾಗಿ ನೋಡಿದರೆ- ದುರ್ಯೋಧನ ಯುದ್ಧ ಭೂಮಿಯಲ್ಲಿ ತನ್ನ ಸೇನೆಯ ಮುಂಚೂಣಿಯಲ್ಲಿ ನಿಂತಿದ್ದಾನೆ. ಪಾಂಡವ ಸೇನೆ ಆತನಿಂದ ದೂರದಲ್ಲಿದೆ. ಆದರೆ ಮಾತನಾಡುವಾಗ ಆತ “ಈ ಪಾಂಡವ ಸೇನೆ” ಹಾಗು “ಆ ನಮ್ಮ ಸೇನೆ” ಎಂದು ಸಂಬೋಧಿಸುತ್ತಾನೆ. ಪಾಂಡವ ಸೇನೆ ಈಗಾಗಲೇ ತನ್ನ ಹತ್ತಿರ ಬಂದು ನಿಂತಿದೆ ಹಾಗು ತನ್ನ ಸೇನೆ ತನ್ನಿಂದ ಬಲು ದೂರದಲ್ಲಿದೆ ಎನ್ನುವಂತೆ ಆತ ಮಾತನಾಡುತ್ತಿದ್ದಾನೆ.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ