Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 11

ಅಯನೇಷು ಚ ಸರ್ವೇಷು ಯಥಾಭಾಗಮವಸ್ಥಿತಾಃ ।
ಭೀಷ್ಮಮೇವಾಭಿರಕ್ಷಂತು ಭವಂತಃ ಸರ್ವ ಏವ ಹಿ ॥೧೧॥

ಅಯನೇಷು ಚ ಸರ್ವೇಷು ಯಥಾ ಭಾಗಮ್ ಅವಸ್ಥಿತಾಃ ಭೀಷ್ಮಮ್ ಏವ ಅಭಿರಕ್ಷಂತು ಭವಂತಃ ಸರ್ವೇ ಏವ ಹಿ- ಆಯಕಟ್ಟಿನ ಎಲ್ಲೆಡೆಗಳಲ್ಲೂ ತಕ್ಕಂತೆ ಹಂಚಿಕೊಂಡು, ಕಾವಲು ನಿಂತು-ನೀವೆಲ್ಲರೂ ಭೀಷ್ಮನನ್ನೇ ಕಾಯುತ್ತಿರಬೇಕು.

“ಆಯಕಟ್ಟಿನ ಎಲ್ಲೆಡೆಗಳಲ್ಲೂ ತಕ್ಕಂತೆ ಹಂಚಿಕೊಂಡು ಕಾವಲು ನಿಂತು ನೀವೆಲ್ಲರೂ ಭೀಷ್ಮರನ್ನು ಕಾಯುತ್ತಿರಬೇಕು” ಎಂದು ದುರ್ಯೋಧನ ದ್ರೋಣರನ್ನುದ್ದೇಶಿಸಿ ಮಾತನಾಡುತ್ತಾನೆ. ಇಲ್ಲಿ “ಸ್ವಲ್ಪ ನಮ್ಮ ಮುದುಕ ಸೇನಾಧಿಪತಿ ಭೀಷ್ಮಾಚಾರ್ಯರನ್ನು ನೋಡಿಕೊಳ್ಳಿ” ಎನ್ನುವಂತಿದೆ ಆತನ ಮಾತು. ಆತನಿಗೆ ತನ್ನ ಸೇನಾಧಿಪತಿಯ ಮೇಲೇ ನಂಬಿಕೆ ಇಲ್ಲ!

ಈ ಮಾತನ್ನು ಕೇಳಿ ಭೀಷ್ಮಾಚಾರ್ಯರಿಗೆ ಅದೆಷ್ಟು ನೋವಾಗಿರಬೇಕು. ತನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ, ತಾನು ಹುಟ್ಟಿಬಂದ ಮನೆತನದ ರಾಜಾಜ್ಞೆಗೆ ಬದ್ಧನಾಗಿ, ತನ್ನ ಅಂತರಂಗದ ಇಚ್ಛೆಗೆ ವಿರುದ್ಧವಾಗಿ, ತಾನು ಪ್ರೀತಿಸಿದ ತನ್ನ ಮೊಮ್ಮೊಕ್ಕಳ ವಿರುದ್ಧ ಹೋರಾಟಕ್ಕೆ ಪ್ರಾಮಾಣಿಕವಾಗಿ ನಿಂತಾಗ, ಭರವಸೆ ಕಳೆದುಕೊಂಡು ಮಾತನಾಡುತ್ತಿರುವ ದುರ್ಯೋಧನನ ಕುಹಕ ನುಡಿ ಅವರಿಗೆ ಎಷ್ಟೊಂದು ನೋವನ್ನುಂಟುಮಾಡಿರಬಹುದು. ಇದನ್ನು ನಾವು ಊಹಿಸುವುದೂ ಕಷ್ಟ. ಈ ಮಾತನ್ನು ಕೇಳಿಸಿಕೊಂಡ ಭೀಷ್ಮಾಚಾರ್ಯರು ಏನು ಮಾಡಿದರು ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ನೋಡೋಣ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *