Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 13

ತತಃ ಶಂಖಾಶ್ಚ ಭೇರ್ಯಶ್ಚ ಪಣವಾನಕಗೋಮುಖಾಃ ।
ಸಹಸೈವಾಭ್ಯಹನ್ಯಂತ ಸ ಶಬ್ದಸ್ತುಮುಲೋsಭವತ್ ॥೧೩॥

ತತಃ ಶಂಖಾಃ ಚ ಭೇರ್ಯಃ ಚ ಪಣವ ಅನಕ ಗೋಮುಖಾಃ ಸಹಸಾ ಏವ ಅಭ್ಯಹನ್ಯಂತ ಸಃ ಶಬ್ದಃ ತುಮುಲಃ ಅಭವತ್–ಆ ಬಳಿಕ ಶಂಖಗಳು, ನಗಾರಿಗಳು, ತಮಟೆ -ಡೋಲು- ಗೊಮುಖಗಳು (ಕಹಳೆ)- ಒಮ್ಮೆಲೆ ಬಾರಿಸಲ್ಪಟ್ಟವು. ಆ ಸದ್ದು ಕಿವಿಗಡಚಿಕ್ಕುವ ಗದ್ದಲವಾಯಿತು.

ಪ್ರಧಾನ ಸೇನಾಧಿಪತಿಯಾದ ಭೀಷ್ಮಾಚಾರ್ಯರು ಶಂಖನಾದ ಮಾಡಿದ ಬಳಿಕ, ಕೌರವ ಸೈನ್ಯದಿಂದ ಶಂಖಗಳು, ನಗಾರಿ-ಡೋಲು-ಗೊಮುಖಗಳು-ಒಮ್ಮೆಲೆ ಬಾರಿಸಲ್ಪಟ್ಟವು. ಆ ಸದ್ದು ಕಿವಿಗಡಚಿಕ್ಕುವ ಗದ್ದಲವಾಯಿತು. ಇಲ್ಲಿ ದುರ್ಯೋಧನಾಗಲಿ ಆತನ ತಮ್ಮಂದಿರರಾಗಲಿ ಶಂಖ ನಾದ ಮಾಡಲಿಲ್ಲ. ಬದಲಾಗಿ ಸೇನಾಧಿಪತಿಯಿಂದ ಶಂಖ ನಾದವಾಯಿತು. ಅದರ ಹಿಂದೆ ಸೈನ್ಯದ ಮುಖಂಡರಿಂದ, ಸೈನಿಕರಿಂದ. ಈ ರೀತಿ ವ್ಯವಸ್ಥಿತ ರೀತಿಯಲ್ಲಿಲ್ಲದ ನಾದ ಗದ್ದಲದಂತೆ ಬಾಸವಾಗುತ್ತಿತ್ತು. ಇಲ್ಲಿ ದುರ್ಯೋಧನ ತನ್ನಲ್ಲಿರುವ ಶಕ್ತಿಯನ್ನು ವ್ಯವಸ್ಥಿತವಾಗಿ ರೂಪಿಸಿರಲಿಲ್ಲ ಎನ್ನುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ನಮ್ಮಲ್ಲಿ ಎಷ್ಟೇ ಯುಕ್ತಿ ಸಾಧನವಿರಲಿ(Resource), ಎಲ್ಲಿಯ ತನಕ ನಮಗೆ ಆ ಸಾಧನವನ್ನು ನಿಯಮಬದ್ಧವಾಗಿ ಉಪಯೋಗಿಸಿಕೊಳ್ಳಲು ಬರುವುದಿಲ್ಲವೋ ಅಲ್ಲಿಯ ತನಕ ಆ ಸಾಧನ ಇದ್ದೂ ವ್ಯರ್ಥ. ಸಾಧನವನ್ನು ಕೈಯಲ್ಲಿಟ್ಟುಕೊಂಡು ಅಧಿಕಾರದ ಆಸೆಯಿಂದ ಮನಃಸ್ಥಿತಿ ಕಳೆದುಕೊಳ್ಳುವ ಮುಂದಾಳು(Leader) ಎಂದೂ ಯಶವನ್ನು ಕಾಣಲಾರ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *