ಶ್ಲೋಕ – 16
ಅನಂತವಿಜಯಂ ರಾಜಾ ಕುಂತೀಪುತ್ರೋ ಯುಧಿಷ್ಠಿರಃ ।
ನಕುಲಃ ಸಹದೇವಶ್ಚ ಸುಘೋಷಮಣಿಪುಷ್ಪಕೌ ॥೧೬॥
ಅನಂತವಿಜಯಮ್ ರಾಜಾ ಕುಂತೀಪುತ್ರಃ ಯುಧಿಷ್ಠಿರಃ – ನಕುಲಃ ಸಹದೇವಃ ಚ ಸುಘೋಷ ಮಣಿಪುಷ್ಪಕೌ-ಕುಂತೀಪುತ್ರನಾದ ರಾಜ ಯುಧಿಷ್ಠಿರ ಅನಂತವಿಜಯವನ್ನು, ನಕುಲ ಸಹದೇವರು ಸುಘೋಷ ಮತ್ತು ಮಣಿಪುಷ್ಪವೆಂಬ ಶಂಖವನ್ನೂದಿದರು
ಭೀಮನ ನಂತರ ಕುಂತಿಯ ಹಿರಿಮಗ, ದೊರೆ ಯುಧಿಷ್ಠಿರ- ಧರ್ಮ ಮತ್ತು ವಿಜಯದ ಸಂಕೇತವಾದ ‘ಅನಂತವಿಜಯ’ ಎನ್ನುವ ಶಂಖವನ್ನು ಊದಿದನು. ನಕುಲ ಹಾಗು ಸಹದೇವರು ಸುಘೋಷ ಮತ್ತು ಮಣಿಪುಷ್ಪವೆಂಬ ಶಂಖವನ್ನು ಕ್ರಮಬದ್ಧವಾಗಿ ಮೊಳಗಿಸಿದರು.
ಮಹಾಭಾರತದಲ್ಲಿ ಬೇರೆ ಯಾವ ರಾಜರ ಶಂಖದ ಹೆಸರಿನ ಬಗ್ಗೆ ಉಲ್ಲೇಖ ಇಲ್ಲ. ಎಲ್ಲಿಯೂ ಬೇರೆ ಶಂಖದ ಹೆಸರನ್ನು ಹೇಳಿಲ್ಲ. ಪಾಂಡವರ ಐದು ಶಂಖಗಳ ಹೆಸರನ್ನು ಭಗವದ್ಗೀತೆಯಲ್ಲಿ ಮಾತ್ರ ಕಾಣಬಹುದು. ಪ್ರಾಯಶಃ ಇದು ನಮಗೆ ನಿತ್ಯ ಸ್ಮರಣೀಯವಾಗಿರಬೇಕು ಎನ್ನುವ ಉದ್ದೇಶದಿಂದ ಗೀತೆಯಲ್ಲಿ ಈ ಐದು ಹೆಸರನ್ನು ವಿಶೇಷವಾಗಿ ಉಲ್ಲೇಖಿಸಿರಬಹುದು.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ