Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 17

ಕಾಶ್ಯಶ್ಚ ಪರಮೇಷ್ವಾಸಃ ಶಿಖಂಡೀ ಚ ಮಹಾರಥಃ ।
ಧೃಷ್ಟದ್ಯುಮ್ನೋ ವಿರಾಟಶ್ಚ ಸಾತ್ಯಕಿಶ್ಚಾಪರಾಜಿತಃ ॥೧೭॥

ಕಾಶ್ಯ ಚ ಪರಮ ಇಷು ಆಸಃ ಶಿಖಂಡೀ ಚ ಮಹಾರಥಃ ಧೃಷ್ಟದ್ಯುಮ್ನಃ ವಿರಾಟಃ ಚ ಸಾತ್ಯಕಿಃ ಚ ಅಪರಾಜಿತಃ -ಹಿರಿಯ ಬಿಲ್ಲೋಜ ಕಾಶಿರಾಜ, ಹಿರಿಯ ತೇರಾಳು ಶಿಖಂಡಿ ಸೇರಿದಂತೆ, ಧೃಷ್ಟದ್ಯುಮ್ನ ಮತ್ತು ವಿರಾಟ, ಸೋಲರಿಯದ ಸಾತ್ಯಕಿಯೊಂದಿಗೆ ಶಂಖನಾದ ಮಾಡಿದರು.

ತದನಂತರ ಹಿರಿಯ ಬಿಲ್ಲೋಜ ಕಾಶಿರಾಜ, ಹಿರಿಯ ತೇರಾಳು ಶಿಖಂಡಿ, ಧೃಷ್ಟದ್ಯುಮ್ನ ಮತ್ತು ವಿರಾಟ, ಸೋಲರಿಯದ ಸಾತ್ಯಕಿ, ಹೀಗೆ ಒಬ್ಬೊಬ್ಬರಾಗಿ ಶಂಖ ನಾದವನ್ನು ಮಾಡಿದರು.

ಇಲ್ಲಿ ಶಿಖಂಡಿಯನ್ನು ಮಹಾರಥ ಎಂದು ಸಂಬೋಧಿಸಿರುವುದನ್ನು ನಾವು ಗಮನಿಸಬೇಕು. ಬಹಳಷ್ಟು ಜನ ಶಿಖಂಡಿ ಎಂದರೆ ನಪುಂಸಕ ಎಂದು ತಿಳಿದಿರುತ್ತಾರೆ. ಆದರೆ ಶಿಖಂಡಿ ಎಂದರೆ ನಪುಂಸಕ ಅಲ್ಲ. ಶಿಖಂಡಿ ಎಂದರೆ ಮೂಲಭೂತವಾಗಿ ಶಿಖಂಡ(ಶಿಖ+ಅಂಡ )ಉಳ್ಳವನು. ಇಲ್ಲಿ ಶಿಖ ಎಂದರೆ ತಲೆಗೂದಲು. ತಲೆ ಕೂದಲನ್ನು ಚನ್ನಾಗಿ ಬಾಚಿ ಹಿಂದೆ ಮೊಟ್ಟೆಯಂತೆ ಕಟ್ಟುವವರು ಶಿಖಂಡಿಗಳು. ಮಹಾಭಾರತದ ಈ ಶಿಖಂಡಿ ಹುಟ್ಟಿದಾಗ ಹೆಣ್ಣಾಗಿದ್ದು , ಆ ಬಳಿಕ ಗಂಡಾದ ಮಹಾರಥ. ಈತ ‘ಸ್ತ್ರೀಪೂರ್ವವಾದ್ದರಿಂದ’ ಭೀಷ್ಮಾಚಾರ್ಯರು ಆತನ ವಿರುದ್ಧ ಬಾಣ ಪ್ರಯೋಗ ಮಾಡಿರಲಿಲ್ಲ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *