ಶ್ಲೋಕ – 19
ಸ ಘೋಷೋ ಧಾರ್ತರಾಷ್ಟ್ರಾಣಾಂ ಹೃದಯಾನಿ ವ್ಯದಾರಯತ್ ।
ನಭಶ್ಚ ಪೃಥಿವೀಂ ಚೈವ ತುಮುಲೋ ವ್ಯನುನಾದಯನ್ ॥೧೯॥
ಸ ಘೋಷಃ ಧಾರ್ತರಾಷ್ಟ್ರಾಣಾಮ್ ಹೃದಯಾನಿ ವ್ಯದಾರಯತ್ ನಭಃ ಚ ಪೃಥಿವೀಮ್ ಚ ಏವ ತುಮುಲಃ ವ್ಯನುನಾದಯನ್- ಆ ಸದ್ದು ನೆಲ-ಮುಗಿಲು ತಬ್ಬಿ, ಪಡಿನುಡಿದು ಅಬ್ಬರಿಸಿ, ಧೃತರಾಷ್ಟ್ರನೆಂದು ಹೆಸರಾದ ನಿನ್ನ ಮಕ್ಕಳ ಎದೆಗಳಿಗಬ್ಬರಿಸಿತು.
ಇಲ್ಲಿ ಸಂಜಯನು ಧೃತರಾಷ್ಟ್ರನ ಮಕ್ಕಳನ್ನು ‘ಧಾರ್ತರಾಷ್ಟ್ರಾಣಾಂ’ ಎಂದು ಸಂಬೋಧಿಸುತ್ತಾನೆ. ಏಕೆಂದರೆ ಇದು ಅವರ ಉಪನಾಮ(Surname). ಈ ಹಿಂದೆ “ನನ್ನ ಮಕ್ಕಳು ಮತ್ತು ಪಾಂಡವರು” ಎಂದು ಸಂಬೋಧಿಸಿದ್ದ ಧೃತರಾಷ್ಟ್ರನಿಗೆ ಸಂಜಯನ ಕುಹಕದ ಉತ್ತರವಿದು.
ಸಂಜಯ ಹೇಳುತ್ತಾನೆ: “ಪಾಂಡವರ ಕಡೆಯಿಂದ ಕ್ರಮಬದ್ಧವಾಗಿ ಮೊಳಗಿದ ಶಂಖನಾದ, ನೆಲಮುಗಿಲನ್ನು ತುಂಬಿ, ಪಡಿನುಡಿದು ಅಬ್ಬರಿಸಿ, ಧೃತರಾಷ್ಟ್ರನೆಂದು ಹೆಸರಾದ ನಿನ್ನ ಮಕ್ಕಳ ಎದೆಯನ್ನು ಸೀಳಿತು” ಎಂದು. ಈ ಹಿಂದೆ ಹೇಳಿದಂತೆ ಪಾಂಡವರ ಶಿಸ್ತುಬದ್ಧ ನಡೆ ಈಗಾಗಲೇ ಕೌರವರ ಎದೆಯನ್ನು ಭೇದಿಸಿತ್ತು. ಯುದ್ಧ ಪ್ರಾರಂಭವಾಗುವ ಮೊದಲೇ ಪಾಂಡವರು ಕೌರವರನ್ನು ಮಾನಸಿಕವಾಗಿ ಸೋಲಿಸಿದ್ದರು.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ