Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 23

ಯೋತ್ಸ್ಯಮಾನಾನವೇಕ್ಷೇಹಂ ಯ ಏತೇತ್ರ ಸಮಾಗತಾಃ ।
ಧಾರ್ತರಾಷ್ಟ್ರಸ್ಯ ದುರ್ಬುದ್ಧೇರ್ಯುದ್ಧೇ ಪ್ರಿಯಚಿಕೀರ್ಷವಃ ॥೨೩॥

ಯೋತ್ಸ್ಯಮಾನಾನ್ ಅವೇಕ್ಷೇ ಅಹಮ್ ಯೇ ಏತೇ ಅತ್ರ ಸಮಾಗತಾಃ ಧಾರ್ತರಾಷ್ಟ್ರಸ್ಯ ದುರ್ಬುದ್ಧೇ ಯುದ್ಧೇ ಪ್ರಿಯ ಚಿಕೀರ್ಷವಃ -ಇಲ್ಲಿ ನೆರೆದ- ಈ ಕಾದ ಹೊರಟವರನ್ನು, ಬುದ್ಧಿಗೇಡಿಯಾದ ದುರ್ಯೋಧನನ ಹಿತವನ್ನು ಬಯಸಿ ಯುದ್ಧದಲ್ಲಿ ಆತನಿಗೆ ಹೆಗಲು ಕೊಡ ಬಯಸಿದವರನ್ನು, ನಾನೊಮ್ಮೆ ನೋಡುತ್ತೇನೆ ಎನ್ನುತ್ತಾನೆ ಅರ್ಜುನ.

“ಬುದ್ಧಿಗೇಡಿ ದುರ್ಯೋಧನನಿಗೆ ಜಯವಾಗಬೇಕು ಎಂದು ಬಯಸಿ, ನಮಗೆ ತೊಂದರೆ ಕೊಡಲು ನನ್ನ ವಿರುದ್ಧ ನಿಂತವರನೊಮ್ಮೆ ನಾನು ನೋಡಬೇಕು” ಎಂದು ಅರ್ಜುನ ಶ್ರೀಕೃಷ್ಣನಲ್ಲಿ ಆಜ್ಞಾರೂಪಿ ಸ್ವರದಲ್ಲಿ ಹೇಳುತ್ತಾನೆ. ಇಲ್ಲಿ ‘ಅಹಮ್’ ಎಂದು ಸಂಬೋಧಿಸುತ್ತಿರುವ ಅರ್ಜುನ ಅಹಂಕಾರದ ದಾಸನಾಗಿರುವುದು ಸ್ಪಷ್ಟವಾಗಿ ಕಾಣುತ್ತದೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *