Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 25

ಭೀಷ್ಮದ್ರೋಣಪ್ರಮುಖತಃ ಸರ್ವೇಷಾಂ ಚ ಮಹೀಕ್ಷಿತಾಮ್ ।
ಉವಾಚ ಪಾರ್ಥ ಪಶ್ಯೈತಾನ್ ಸಮವೇತಾನ್ ಕುರೂನಿತಿ ॥೨೫॥

ಭೀಷ್ಮಃ ದ್ರೋಣ ಪ್ರಮುಖತಃ ಸರ್ವೇಷಾಮ್ ಚ ಮಹೀಕ್ಷಿತಾಮ್ ಉವಾಚ ಪಾರ್ಥ ಪಶ್ಯ ಏತಾನ್ ಸಮವೇತಾನ್ ಕುರೂನ್ ಇತಿ- ಭೀಷ್ಮ, ದ್ರೋಣರು, ಹಾಗು ಇತರ ಅರಸರು ನೇರವಾಗಿ ಕಣ್ಣಿಗೆ ಬೀಳುವಂತೆ ರಥವನ್ನು ನಿಲ್ಲಿಸಿ ಕೃಷ್ಣ ಹೇಳುತ್ತಾನೆ: “ಹೇ ಪಾರ್ಥ, ನೋಡು ಈ ನೆರೆದ ಕುರುಗಳನ್ನು” ಎಂದು.

ಶ್ರೀಕೃಷ್ಣನು ಅರ್ಜುನನ ಅಣತಿಯಂತೆ ರಥವನ್ನು ಎರಡೂ ಸೈನ್ಯದ ಮಧ್ಯದಲ್ಲಿ ತಂದು, ಭೀಷ್ಮ-ದ್ರೋಣರು ಮತ್ತು ಎಲ್ಲ ಅರಸರು ನೇರವಾಗಿ ಕಣ್ಣಿಗೆ ಕಾಣುವಂತೆ ನಿಲ್ಲಿಸಿ, ಭಾಂದವ್ಯವನ್ನು ಬಡಿದೇಳಿಸುವ ಧ್ವನಿಯಲ್ಲಿ ಹೇಳುತ್ತಾನೆ: “ಹೇ ಪಾರ್ಥ, ಇಲ್ಲಿ ಸೇರಿರುವ ನಿನ್ನ ‘ಕುರುಗಳನ್ನು’ ನೋಡು” ಎಂದು.

ಇದು ಶ್ರೀಕೃಷ್ಣನ ಅದ್ಭುತ ಮಾನಸಿಕ ಚಿಕಿತ್ಸೆ(Psycho therapy). ಇಲ್ಲಿ ಅರ್ಜುನನ ಮನಃಸ್ಥಿತಿಯ ಪರೀಕ್ಷೆ ನಡೆಯುತ್ತಿದೆ. ಅರ್ಜುನ ಒಬ್ಬ ರಾಜ. ಆತನ ಮೂಲ ಕರ್ತವ್ಯ ಧರ್ಮದ ಪರ ಹೋರಾಟ ಮಾಡುವುದು ಹಾಗು ಪ್ರಜಾಪಾಲನೆ ಮಾಡುವುದು. ಹೀಗೆ ತನ್ನ ಕರ್ತವ್ಯ ಪಾಲನೆ ಮಾಡುತ್ತಿರುವಾಗ, ಧರ್ಮದ ವಿರುದ್ಧ ನಿಂತವರು ಯಾರೇ ಆಗಿರಲಿ, ಅವರನ್ನು ಶಿಕ್ಷಿಸುವುದು ಆತನ ಕರ್ತವ್ಯ. ಆತನೊಬ್ಬ ನ್ಯಾಯಾಧೀಶನಿದ್ದಂತೆ. ಇಲ್ಲಿ ನನ್ನ ಕುಟುಬದವರು, ನನ್ನ ಬಂಧುಗಳು, ನನ್ನ ಸ್ನೇಹಿತರು ಎನ್ನುವ ತಾರತಮ್ಯ ಸಲ್ಲದು. ಇಂತಹ ಜವಾಬ್ಧಾರಿಯುತ ಕಾರ್ಯದಲ್ಲಿ ತೊಡಗಿದ ಅರ್ಜುನ, ತನ್ನ ಸಮೀಪಬಂಧುಗಳನ್ನು, ಗುರುಗಳನ್ನು ಕಂಡಾಗ ಹೇಗೆ ಪರಿತಪಿಸುತ್ತಾನೆ ಎನ್ನುವುದನ್ನು ಮುಂದಿನ ಶ್ಲೋಕದಲ್ಲಿ ನೋಡೋಣ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *