ಶ್ಲೋಕ – 26
ತತ್ರಾಪಶ್ಯತ್ ಸ್ಥಿತಾನ್ ಪಾರ್ಥಃ ಪಿತ ನಥ ಪಿತಾಮಹಾನ್ ।
ಆಚಾರ್ಯಾನ್ಮಾತುಲಾನ್ ಭ್ರಾತ ನ್ ಪುತ್ರಾನ್ ಪೌತ್ರಾನ್ ಸಖೀಂಸ್ತಥಾ ॥೨೬॥
ಶ್ವಶುರಾನ್ ಸುಹೃದಶ್ಚೈವ ಸೇನಯೋರುಭಯೋರಪಿ ।
ತತ್ರ ಅಪಶ್ಯತ್ ಸ್ಥಿತಾನ್ ಪಾರ್ಥಃ ಪಿತ ನಥ ಪಿತಾಮಹಾನ್ |
ಆಚಾರ್ಯಾನ್ ಮಾತುಲಾನ್ ಭ್ರಾತ ನ್ ಪುತ್ರಾನ್ ಪೌತ್ರಾನ್ ಸಖೀನ್ ತಥಾ ||
ಶ್ವಶುರಾನ್ ಸುಹೃದಃ ಚ ಏವ ಸೇನಯೋಃ ಉಭಯೋಃ ಅಪಿ -ಅಲ್ಲಿ ಎರಡೂ ಕಡೆಯ ಪಡೆಗಳಲ್ಲಿ ನೆರೆದವರನ್ನು ಅರ್ಜುನನು ಕಂಡನು. ತಂದೆಯಂತಿರುವವರನ್ನು, ಅಜ್ಜಂದಿರನ್ನು, ಗುರುಗಳನ್ನು, ಸೋದರಮಾವಂದಿರನ್ನು, ಅಣ್ಣ-ತಮ್ಮಂದಿರನ್ನು, ಮಕ್ಕಳನ್ನು, ಮೊಮ್ಮೊಕ್ಕಳನ್ನು, ಸಂಗಾತಿಗಳನ್ನು ಮಾವಂದಿರನ್ನು ಮತ್ತು ಗೆಳೆಯರನ್ನು.
ಕೃಷ್ಣನು ರಥವನ್ನು ಅರ್ಜುನನ ಆತ್ಮೀಯ ಬಂಧುಗಳ ಎದುರು ನಿಲ್ಲಿಸಿದ್ದರಿಂದ, ಅಲ್ಲಿ ನೆರೆದ ಎಲ್ಲರನ್ನೂ ಅರ್ಜುನ ನೋಡುತ್ತಾನೆ. ಇಷ್ಟು ಹೊತ್ತು ಜಂಭದ ಮಾತನಾಡಿದ ಆತನಿಗೆ ಈಗ ತನ್ನೆದುರಿಗೆ ನಿಂತ ತಂದೆ ಸಮಾನರು, ಅಜ್ಜಂದಿರು, ವಿದ್ಯೆ ಕೊಟ್ಟ ಆಚಾರ್ಯರು, ಸೋದರಮಾವಂದಿರು, ಅಣ್ಣತಮ್ಮಂದಿರು, ಮಕ್ಕಳು, ಮೊಮ್ಮೊಕ್ಕಳು, ಸ್ನೇಹ ಸಂಗಾತಿಗಳು, ಮಾವಂದಿರು, ಹಿತೈಷಿಗಳು, ಎಲ್ಲರು ಎರಡೂ ಕಡೆಗಳಲ್ಲಿ ಕಾಣಿಸುತ್ತಾರೆ.
ಎಚ್ಚರದಿಂದ ಈ ಶ್ಲೋಕವನ್ನು ಗಮನಿಸಿದರೆ, ಅರ್ಜುನನಿಗೆ ಅಲ್ಲಿ ಕಾಣಿಸಿದ್ದು ಕೇವಲ ಗುರು ಹಿರಿಯರು, ಬಂಧುಗಳು ಮತ್ತು ಆತ್ಮೀಯರು. ಇಲ್ಲಿ ಆತನಿಗೆ ಬಂಧು ಪ್ರೇಮ ಎಚ್ಚರ ಆಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಕರ್ತವ್ಯ ನಿರತ ಜನಪಾಲಕ ರಾಜನಿಗೆ ಬಂಧು ಪ್ರೇಮ ತರವಲ್ಲ. ಪ್ರಜಾಪಾಲಕನಾದವನಿಗೆ ಪ್ರಜಾಪಾಲನೆ ಮೂಲಧರ್ಮ. ಅದನ್ನು ಆತ ಎಂದೂ ಚ್ಯುತಿ ಬರದಂತೆ ನಿರ್ವಹಿಸಬೇಕು. ಈ ರೀತಿ ಕಾರ್ಯ ನಿರ್ವಹಿಸುತ್ತಿರುವಾಗ ‘ನನ್ನ ಬಂಧುಗಳು, ನನ್ನ ಪರಿವಾರ’ ಎಂದು ಯಾವ ತಾರತಮ್ಯ ಮಾಡುವಂತಿಲ್ಲ.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ