Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 30

ಗಾಂಡೀವಂ ಸ್ರಂಸತೇ ಹಸ್ತಾತ್ ತ್ವಕ್ ಚೈವ ಪರಿದಹ್ಯತೇ ।
ನಚ ಶಕ್ನೋಮ್ಯವಸ್ಥಾತುಂ ಭ್ರಮತೀವ ಚ ಮೇ ಮನಃ ॥೩೦॥

ಗಾಂಡೀವಮ್ ಸ್ರಂಸತೇ ಹಸ್ತಾತ್ ತ್ವಕ್ ಚೈವ ಪರಿದಹ್ಯತೇ ನಚ ಶಕ್ನೋಮಿ ಅವಸ್ಥಾತುಂ ಭ್ರಮತೀವ ಚ ಮೇ ಮನಃ -ಗಾಂಡೀವ ಕೈಯಿಂದ ಜಾರುತ್ತಿದೆ, ತೊಗಲು ಉರಿಯೆದ್ದಿದೆ. ನಿಂತಲ್ಲಿ ನಿಲ್ಲಲಾಗುತ್ತಿಲ್ಲ. ನನ್ನ ಮನಸ್ಸು ಗೊಂದಲಮಯವಾಗುತ್ತಿದೆ.

ಒಬ್ಬ ವ್ಯಕ್ತಿ ತನ್ನ ಆತ್ಮ ವಿಶ್ವಾಸವನ್ನು ಕಳೆದುಕೊಂಡಾಗ, ಆತನ ಅಂತರಂಗದ ಅನುಭವ ದೈಹಿಕವಾಗಿ ಹೇಗೆ ಹೊರಹೊಮ್ಮುತ್ತದೆ ಎನ್ನುವುದನ್ನು ಇಲ್ಲಿ ಕಾಣಬಹುದು.ಆತ್ಮವಿಶ್ವಾಸವಿರದ ವ್ಯಕ್ತಿ ತನ್ನ ಮುಷ್ಠಿ ಬಿಗಿ ಹಿಡಿಯಲಾರ. ಇಲ್ಲಿ ಅರ್ಜುನನ ಸ್ಥಿತಿ ಕೂಡಾ ಹಾಗೇ ಆಗಿದೆ. ಆತ ಹೇಳುತ್ತಾನೆ: “ಗಾಂಡೀವ ನನ್ನ ಕೈಯಿಂದ ಜಾರುತ್ತಿದೆ, ಇಡೀ ಮೈ ಉರಿ ಎದ್ದ ಹಾಗೆ ಸಂಕಟವಾಗುತ್ತಿದೆ” ಎಂದು. ಇದು ಒಳಗಿನ ಭಾವದ, ತುಮುಲದ ಅಭಿವ್ಯಕ್ತ. ಒಮ್ಮೆ ಮನಸ್ಸು ಸ್ಥಿರವಿಲ್ಲದಿದ್ದರೆ ದೇಹಕೂಡಾ ಸ್ಥಿರವಿರಲಾರದು. ಅದೇ ರೀತಿ ದೇಹ ಸ್ಥಿರವಿಲ್ಲದಿದ್ದರೆ ಮನಸ್ಸನ್ನು ಸ್ಥಿರಗೊಳಿಸುವುದು ಸಾದ್ಯವಿಲ್ಲ. “ಈ ರಥದಲ್ಲಿ ಕುಳಿತುಕೊಳ್ಳಲು ಆಗುತ್ತಿಲ್ಲ. ಮನಸ್ಸು ಗೊಂದಲಮಯವಾಗಿದೆ” ಎಂದು ಕೃಷ್ಣನಲ್ಲಿ ಅರ್ಜುನ ಪರಿತಪಿಸುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *