ಶ್ಲೋಕ – 33
ಯೇಷಾಮರ್ಥೇ ಕಾಂಕ್ಷಿತಂ ನೋ ರಾಜ್ಯಂ ಭೋಗಾಃ ಸುಖಾನಿ ಚ ।
ತ ಇಮೇವಸ್ಥಿತಾ ಯುದ್ಧೇ ಪ್ರಾಣಾಂಸ್ತ್ಯಕ್ತ್ವಾ ಧನಾನಿ ಚ ॥೩೩॥
ಯೇಷಾಮ್ ಅರ್ಥೇ ಕಾಂಕ್ಷಿತಂ ನೋ ರಾಜ್ಯಂ ಭೋಗಾಃ ಸುಖಾನಿ ಚ ತೇ ಇಮೇ ಅವಸ್ಥಿತಾ ಯುದ್ಧೇ ಪ್ರಾಣಾನ್ ತ್ಯಕ್ತ್ವಾ ಧನಾನಿ ಚ-ಯಾರಿಗಾಗಿ ಅರೆಸೋತ್ತಿಗೆ? ಸುಖ-ಭೋಗಕ್ಕಾಗಿ ಇವರು ಹರಣದ ಮತ್ತು ಹಣದ ಹಂಗು ತೊರೆದು ಕಾಳಗದ ಕಣದಲ್ಲಿ ನಿಂತಿದ್ದಾರೆ.
ಒಂದು ವೇಳೆ ಈ ರಾಜಭೋಗ ಬೇಕಿದ್ದರೆ ಅದು ಯಾರಿಗೋಸ್ಕರ? ನಮ್ಮೆಲ್ಲ ಗುರು ಹಿರಿಯರ ಮಧ್ಯ, ಸಂತೋಷದಿಂದ ನಾವಿರಬೇಕು. ಅವರನ್ನೆಲ್ಲಾ ಕೊಂದು ನಾವೇನು ಸಂತೋಷಪಡುವುದು? ಯಾರಿಗೋಸ್ಕರ ಈ ಜೀವನದ ಸುಖವನ್ನು ಸಾಮ್ರಾಜ್ಯವನ್ನು ಬಯಸುತ್ತಿದ್ದೆವೋ, ಅವರೆಲ್ಲರೂ ಪ್ರಾಣದ ಹಂಗನ್ನು ತೊರೆದು, ಸರ್ವಸ್ವವನ್ನೂ ಕಳೆದುಕೊಳ್ಳಲು ಸಿದ್ಧರಾಗಿ ನಮ್ಮೆದುರು ಯುದ್ಧಕ್ಕೆ ನಿಂತಿದ್ದಾರೆ.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ