Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 35

ಏತಾನ್ ಹಂತುಮಿಚ್ಛಾಮಿ ಘ್ನತೋsಪಿ ಮಧುಸೂದನ ।
ಅಪಿ ತ್ರೈಲೋಕ್ಯರಾಜ್ಯಸ್ಯ ಹೇತೋಃ ಕಿಂ ನು ಮಹೀಕೃತೇ ॥೩೫॥

ಏತಾನ್ ನ ಹಂತುಮ್ ಇಚ್ಛಾಮಿ ಘ್ನತಃ ಅಪಿ ಮಧುಸೂದನ ಅಪಿ ತ್ರೈಲೋಕ್ಯ ರಾಜ್ಯಸ್ಯ ಹೇತೋಃ ಕಿಮ್ ನು ಮಹೀ ಕೃತೇ- ಓ ಮಧುಸೂದನ, ನನ್ನನ್ನು ಕೊಲ್ಲಬಂದರೂ ನಾನಿವರನ್ನು ಕೊಲ್ಲಬಯಸೆ. ಮೂರು ಲೋಕದ ದೊರೆತನಕ್ಕಾಗಿ ಕೂಡಾ. ಇನ್ನು ಭೂಮಿಯ ಮಾತೇನು?

ನನಗೆ ಇವರನ್ನು ಕೊಲ್ಲುವ ಬಯಕೆ ಇಲ್ಲ. ಒಂದು ವೇಳೆ ಅವರು ನನ್ನನ್ನು ಕೊಲ್ಲ ಬಂದರೂ ಕೂಡಾ ನಾನವರನ್ನು ಕೊಲ್ಲಲಾರೆ. ಇಡೀ ಬ್ರಹ್ಮಾಂಡದ ಒಡೆತನ ಸಿಗುತ್ತದೆ ಎಂದರೂ ಕೂಡಾ ನಾನು ಯುದ್ಧ ಮಾಡಲಾರೆ. ಅಂಥದ್ದರಲ್ಲಿ ಈ ತುಂಡು ಭೂಮಿಗಾಗಿ ಏಕೆ ಯುದ್ಧ?

ಇಲ್ಲಿ ಅರ್ಜುನ ಶ್ರೀಕೃಷ್ಣನನ್ನು ‘ಮಧುಸೂದನ’ ಎಂದು ಸಂಬೋಧಿಸಿದ್ದಾನೆ. ಮಧು ಎಂದರೆ ಆನಂದ. ಮಧುಸೂದನ ಎಂದರೆ ಆನಂದ ನಾಶಕ. ಧರ್ಮ ಮಾರ್ಗವನ್ನು ಬಿಟ್ಟು, ಅಧರ್ಮಿಯಾಗಿ, ಮದ(ಆಹಂಕಾರ)ದಿಂದ ಸಾಗುವವರ ಆನಂದವನ್ನು ನಾಶ ಮಾಡಿ, ಸಜ್ಜನರ ಉದ್ಧಾರ ಮಾಡುವ ಆನಂದರೂಪಿ ಭಗವಂತ ಮಧುಸೂದನ. “ಸಾತ್ವಿಕರಿಗೆ ಆನಂದವನ್ನು ಕೊಟ್ಟು ತಾಮಸಿಗಳ ಆನಂದ ಹರಣ ಮಾಡುವ ನೀನು ಏನು ಮಾಡಲು ಬಂದವ?” ಎನ್ನುವ ಧ್ವನಿ ಈ ಸಂಬೋಧನೆಯಲ್ಲಿದೆ. “ಯುದ್ಧ ಮಾಡಬೇಕೋ ಬೇಡವೋ ಎನ್ನುವ ಗೊಂದಲ ನನ್ನನ್ನು ಕಾಡುತ್ತಿದೆ” ಎಂದು ಅರ್ಜುನ ತನ್ನ ತುಮುಲವನ್ನು ಕೃಷ್ಣನಲ್ಲಿ ವ್ಯಕ್ತಪಡಿಸುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *