ಶ್ಲೋಕ – 38
ಯದ್ಯಪ್ಯೇತೇ ನ ಪಶ್ಯಂತಿ ಲೋಭೋಪಹತಚೇತಸಃ ।
ಕುಲಕ್ಷಯಕೃತಂ ದೋಷಂ ಮಿತ್ರದ್ರೋಹೇ ಚ ಪಾತಕಮ್ ॥೩೮॥
ಯದಿ ಅಪಿ ಏತೇ ನ ಪಶ್ಯಂತಿ ಲೋಭ ಉಪಹತ ಚೇತಸಃ ಕುಲಕ್ಷಯ ಕೃತಮ್ ದೋಷಮ್ ಮಿತ್ರದ್ರೋಹೇ ಚ ಪಾತಕಮ್- -ಇವರೆಲ್ಲರ ಹೃದಯ ಲೋಭದ ವಶವಾಗಿದೆ. ಕುಲದ ಅಳಿವಿನಿಂದಾಗುವ ಮತ್ತು ಮಿತ್ರ ದ್ರೋಹದಿಂದಾಗುವ ಪಾತಕವನ್ನು ಇವರು ಕಾಣುತ್ತಿಲ್ಲ.
ದುಡ್ಡಿನ ಆಸೆಯಿಂದ, ಲೋಭದಿಂದ ಕುರುಡಾಗಿ ಅವರ ಮನಸ್ಸು ಯೋಚಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಇದರಿಂದ ಕುಲಕ್ಷಯವಾಗುತ್ತದೆ. ಇಡೀ ಭರತವಂಶ ನಿರ್ವಂಶವಾಗುತ್ತದೆ. ಬಂಧುಗಳಾದ ನಾವು ಒಬ್ಬರಿಗೊಬ್ಬರು ಮಿತ್ರರಂತೆ ಆತ್ಮೀಯತೆಯಿಂದ ಬದುಕಬೇಕಿತ್ತು. ಆದರೆ ಒಬ್ಬರನೊಬ್ಬರು ದ್ವೇಷಿಸುತ್ತಿದ್ದೇವೆ. ಇದು ದ್ರೋಹ.
ಇಲ್ಲಿ ‘ಮಿತ್ರ’ ಎನ್ನುವ ಪದ ಬಳಕೆಯಾಗಿದೆ. ಯಾರು ನಿಜವಾದ ಮಿತ್ರ? ನಮಗೆ ಯಾವಾಗ ಆಪತ್ತು ಬಂದೀತು ಎಂದು ನಮಗಿಂತ ಮೊದಲೇ ಊಹಿಸಿ, ಪೂರ್ವಭಾವಿಯಾಗಿ ಯಾವುದೇ ಪ್ರತಿಫಲವನ್ನು ಅಪೇಕ್ಷಿಸದೆ, ಜೀವಕ್ಕೆ ಜೀವ ಕೊಡುವವನು ‘ಮಿತ್ರ’.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ