ಶ್ಲೋಕ – 44
ಉತ್ಸನ್ನಕುಲಧರ್ಮಾಣಾಂ ಮನುಷ್ಯಾಣಾಂ ಜನಾರ್ದನ ।
ನರಕೇ ನಿಯತಂ ವಾಸೋ ಭವತೀತ್ಯನುಶುಶ್ರುಮ ॥೪೪॥
ಉತ್ಸನ್ನ ಕುಲಧರ್ಮಾಣಾಮ್ ಮನುಷ್ಯಾಣಾಮ್ ಜನಾರ್ದನ ನರಕೇ ನಿಯತಮ್ ವಾಸಃ ಭವತಿ ಇತಿ ಅನುಶುಶ್ರುಮ- ಓ ಜನಾರ್ಧನ, ಕುಲ ಧರ್ಮದ ನೆಲೆದಪ್ಪಿದವರಿಗೆ ನರಕವೇ ಮುಗಿಯದ ನೆಲೆ ಎಂದು ಕೇಳಿ ಬಲ್ಲೆವು.
ಇಹದಲ್ಲೂ ನರಕ, ಪರದಲ್ಲೂ ನರಕ, ಹೀಗೆ ಜನ್ಮವೆಲ್ಲಾ ನರಕದಲ್ಲಿ. ಎಂದೆಂದೂ ನರಕದಲ್ಲೇ ಕೊಳೆಯುವ ಪರಿಸ್ಥಿತಿ ಬರುತ್ತದೆ ಎಂದು ತಿಳಿದವರು ಹೇಳುವುದನ್ನು ಕೇಳಿ ತಿಳಿದಿದ್ದೇನೆ. ಹೀಗೆ ಇಹವೂ ನರಕ, ಪರವೂ ನರಕವಾಗಲು ನಾವೇ ಕಾರಣವಾಗುತ್ತೇವೆ.
ಸೊಬಗು – Sobagu ಕರ್ನಾಟಕದ ಗತವೈಭವ ಸಾರುತ್ತಿರುವ ತಾಣ – ನಮ್ಮ ಕನ್ನಡ ನಾಡು
ಜೈ ಶ್ರೀ ರಾಮ್
ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ