Friday , 16 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 45

ಅಹೋ ಬತ ಮಹತ್ ಪಾಪಂ ಕರ್ತುಂ ವ್ಯವಸಿತಾ ವಯಮ್ ।
ಯದ್ ರಾಜ್ಯಸುಖಲೋಭೇನ ಹಂತುಂ ಸ್ವಜನಮುದ್ಯತಾಃ ॥೪೫॥

ಅಹೋ ಬತ ಮಹತ್ ಪಾಪಮ್ ಕರ್ತುಮ್ ವ್ಯವಸಿತಾ ವಯಮ್

ಯತ್ ರಾಜ್ಯಸುಖಲೋಭೇನ ಹಂತುಮ್ ಸ್ವಜನಮ್ ಉದ್ಯತಾಃ -ಅಯ್ಯೋ….! ಎಂಥ ಹಿರಿಯ ತಪ್ಪನ್ನು ಮಾಡತೊಡಗಿದ್ದೆವು ನಾವು ! ದೊರೆತನದ ಸುಖದ ದುರಾಸೆಯಿಂದ ನಮ್ಮ ಮಂದಿಯನ್ನೇ ಕೊಲ್ಲ ಹೊರಟಿದ್ದೇವಲ್ಲ !

ಇಲ್ಲಿ ಅರ್ಜುನ ಕುಸಿದು ಬೀಳುವ ದ್ವನಿಯಲ್ಲಿ ಹೇಳುತ್ತಾನೆ- “ಅಯ್ಯೋ.. ಎಂಥ ದೊಡ್ಡ ದುರಂತ, ಎಂಥ ದೊಡ್ಡ ಪಾಪ ಕಾರ್ಯ ನಮ್ಮ ಮುಂದೆ ನಡೆಯುತ್ತಿತ್ತು? ಎಂಥ ಪ್ರಮಾದ ಆಗಿ ಹೋಗುತ್ತಿತ್ತು? ನಾವು ದೊಡ್ಡ ತಪ್ಪನ್ನು ಮಾಡಲು ಕೈ ಹಾಕುತ್ತಿದ್ದೆವು. ರಾಜ್ಯ ಸುಖದ ಲೋಭದಿಂದ ನಮ್ಮ ಜನರನ್ನೇ ನಾವು ಕೊಂದು ಇಡೀ ಜನಾಂಗವನ್ನು ಅಧಃಪಾತಕ್ಕೆ ತಳ್ಳುವ ಕೆಲಸ ನಮ್ಮಿಂದಾಗುತ್ತಿತ್ತು” ಎಂದು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *