Saturday , 10 October 2026

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 01

ಶ್ಲೋಕ – 9

ಅನ್ಯೇ ಚ ಬಹವಃ ಶೂರಾ ಮದರ್ಥೇ ತ್ಯಕ್ತಜೀವಿತಾಃ ।
ನಾನಾಶಸ್ತ್ರಪ್ರಹರಣಾಃ ಸರ್ವೇ ಯುದ್ಧವಿಶಾರದಾಃ ॥೯॥

ಅನ್ಯೇ ಚ ಬಹವಃ ಶೂರಾಃ ಮತ್ ಅರ್ಥೇ ತ್ಯಕ್ತ ಜೀವಿತಾಃ ನಾನಾ ಶಸ್ತ್ರ ಪ್ರಹರಣಾಃ ಸರ್ವೇ ಯುದ್ಧ ವಿಶಾರದಾಃ – ‘ಇನ್ನೂ ಬಹಳ ಮಂದಿ ವೀರರಿದ್ದಾರೆ. ನನಗಾಗಿ ಬದುಕು ತೆರಲು ಬಂದವರು. ಬಗೆಬಗೆಯ ಆಯುಧಗಳಿಂದ ಹೋರಬಲ್ಲವರು. ಎಲ್ಲರೂ ಕಾಳಗದಲ್ಲಿ ಪಳಗಿದವರು.

ಮೇಲ್ನೋಟಕ್ಕೆ ಈ ಶ್ಲೋಕವನ್ನು ನೋಡಿದರೆ ನಮಗೆ ದುರ್ಯೋಧನ ತನ್ನ ಕಡೆಯ ವೀರರ ಬಗ್ಗೆ ಹೇಳುತ್ತಿರುವಂತೆ ಕಂಡರೂ ಕೂಡಾ, ಇಲ್ಲಿ ಆತ ಹೇಳುತ್ತಿರುವ ವಿಷಯವೇ ಬೇರೆ. ಆತ ಈ ಮಾತನ್ನು ದ್ರೋಣರಲ್ಲಿ ಹೇಳುತ್ತಿದ್ದಾನೆ, ಹಾಗು ಆತ ತನ್ನ ಮಾತನ್ನು ಆರಂಭಿಸಿದ್ದು “ಪಾಂಡವರ ಆಚಾರ್ಯರೇ” ಎಂದು. ಇಲ್ಲಿ ಆತ- ನಮ್ಮ ಕಡೆ ಅನೇಕ ಶೂರರಿದ್ದಾರೆ, ‘ಎಲ್ಲರೂ ತಮ್ಮ ಪ್ರಾಣ ಕೊಡಲು ಬಂದವರು’ ಎಂದು ಕುಹಕದಿಂದ ಹೇಳುತ್ತಿದ್ದಾನೆ. ಅವರೆಲ್ಲರೂ ವಿವಿಧ ಶಸ್ತ್ರಗಳನ್ನು ಪ್ರಯೋಗಿಸಬಲ್ಲರು ಎನ್ನುವ ದುರ್ಯೋಧನ, ತನ್ನ ಪಾಲಿಗೆ ಯಾರೂ ಇಲ್ಲ ಎನ್ನುವ ಭಾವನೆಯನ್ನು ವ್ಯಕ್ತಪಡಿಸುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

2 ಪ್ರತಿಕ್ರಿಯೆಗಳು

  1. ಜೈ ಶ್ರೀ ರಾಮ್

  2. RAMAKRISHNA HEGDE

    ನೀವು ಭಗವದ್ಗೀತೆಯನ್ನು ವಿಶ್ಲೇಷಿಸಿದ ರೀತಿ ತುಂಬಾ ಹಿಡಿಸಿತು. ಇದನ್ನು ಎಲ್ಲರಿಗೂ ತಲುಪಿಸುವ ಉದ್ದೇಶ ನನ್ನದು. ನಿಮ್ಮ ವೆಬ್ ಪೇಜಿನ ಲಿಂಕನ್ನೂ ನನ್ನ ಪ್ರತೀ ಪೋಸ್ಟಿನಲ್ಲೂ ಹಾಕಿರುತ್ತೇನೆ. ಇದು ನಿಮ್ಮ ಕಾಪಿರೈಟಿಗೆ ನನಗೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೆಳ್ಳುತ್ತೇನೆ. ಹಾಗೇನಾದರೂ ಇದ್ದರೆ ತಿಳಿಸಿ. ನನ್ನ ಉದ್ದೇಶ ಹೆಚ್ಚಿನ ಜನರಿಗೆ ಗೀತೆಯ ತಾತ್ಪರ್ಯ ತಿಳಿಸುವುದೇ ಆಗಿರುತ್ತದೆ. ಇದರಲ್ಲಿ ಯಾವುದೇ ಆರ್ಥಿಕ ದೃಷ್ಟಿ ಇಲ್ಲ. ನಿಮ್ಮ ಉತ್ತರಕ್ಕೆ ಕಾಯುತ್ತೇನೆ

Leave a Reply

Your email address will not be published. Required fields are marked *