ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 24

ಅಚ್ಛೇದ್ಯೋSಯಮದಾಹ್ಯೋSಯಮಕ್ಲೇದ್ಯೋSಶೋಷ್ಯ ಏವ ಚ ।
ನಿತ್ಯಃ ಸರ್ವಗತಃ ಸ್ಥಾಣುರಚಲೋಯಂ ಸನಾತನಃ ॥೨೪॥

ಅಚ್ಛೇದ್ಯಃ ಅಯಮ್ ಅದಾಹ್ಯಃ ಅಯಮ್ ಅಕ್ಲೇದ್ಯಃ ಅಶೋಷ್ಯಃ ಏವ ಚ ನಿತ್ಯಃ ಸರ್ವಗತಃ ಸ್ಥಾಣು ಆಚಲಃ ಅಯಮ್ ಸನಾತನಃ –ಈ ಜೀವನನ್ನು ಕಡಿಯಲಾಗದು. ಇವನನ್ನು ಸುಡಲಾಗದು. ನೆನೆಸಲಾಗದು; ಒಣಗಿಸಲೂ ಆಗದು. ಎಂದೆಂದೂ ಎಲ್ಲೆಡೆ ಹಬ್ಬಿರುವ, ಏತರಿಂದಲೂ ಮಾರ್ಪಡದ, ಅವಿಚಲನಾದ, ಪುರಾಣಪುರುಷನ ಪಡಿಯಚ್ಚು ಇವನು.[ಎಲ್ಲೆಡೆ ಹಬ್ಬಿರುವ ಭಗವಂತನನ್ನೆ ಎಂದೆಂದೂ ಹೊಂದಿರುವ ಅಣುರೂಪಿ. ಇವನು ಏತರಿಂದಲೂ ಮಾರ್ಪಡದ ನಿಯತಿಗೆ ಬದ್ಧ ; ವೇದದ ವಿಧಿ-ನಿಷೇಧಗಳಿಗೆ ಕೂಡ].

ಜೀವನನ್ನು ಇಂದಲ್ಲ, ಮುಂದೆಂದೂ ಯಾರಿಂದಲೂ ನಾಶಮಾಡಲು ಸಾದ್ಯವಿಲ್ಲ. ಏಕೆಂದರೆ ಆತ ತನ್ನ ಗುಣಧರ್ಮದಿಂದ ಎಂದೂ ಬದಲಾಗದ, ಸರ್ವಗತನಾದ, ವಿಚಲಿತನಾಗದ-ಭಗವಂತನ ಪಡಿಯಚ್ಚು. ಯಾವ ಆಯುಧಕ್ಕೂ ನಿಲುಕದೆ ಎಲ್ಲ ಕಾಲದಲ್ಲೂ ಏಕರೂಪನಾಗಿರುವ, ಎಲ್ಲ ಕಡೆ ಸ್ಥಿರವಾದ, ಬದಲಾವಣೆ ಇಲ್ಲದೆ ಇರುವ ಗುಣಧರ್ಮ ಜೀವನಿಗಿದೆ. ಜೀವ ಸನಾತನ. ಅಂದರೆ ನಾತನದಿಂದ ಸಹಿತನಾದವ. ಇಲ್ಲಿ ‘ನಾತನ’ ಎಂದರೆ ‘ನಾದನ’. ಅಂದರೆ ವೇದನಾದ. ಜೀವ ವೇದನಾದದಿಂದ ಸಹಿತನಾಗಿ, ಸಮಸ್ತ ವೇದ ಪ್ರತಿಪಾದ್ಯನಾದ ಭಗವಂತನ ಮಡಿಲಲ್ಲಿ ವೇದದ ವಿಧಿ-ನಿಷೇಧಗಳಿಗೆ ಬದ್ಧನಾಗಿರುತ್ತಾನೆ. ಅದು ಸರ್ವಗತನಾದ ಭಗವಂತನನ್ನು ಆಶ್ರಯಿಸಿರುವ ಮಹತ್ತಾದ ಅಣು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *