ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 26

ಅಥ ಚೈ ನಂ ನಿತ್ಯಜಾತಂ ನಿತ್ಯಂ ವಾ ಮನ್ಯಸೇ ಮೃತಮ್ ।
ತಥಾSಪಿ ತ್ವಂ ಮಹಾಬಾಹೋ ನೈನಂ ಶೋಚಿತುಮರ್ಹಸಿ ॥೨೬॥

ಅಥ ಚ ಏನಮ್ ನಿತ್ಯಜಾತಮ್ ನಿತ್ಯಮ್ ವಾ ಮನ್ಯಸೇ ಮೃತಮ್ ತದಾ ಅಪಿ ತ್ವಮ್ ಮಹಾಬಾಹೋ ನ ಏನಮ್ ಶೋಚಿತುಮ್ ಅರ್ಹಸಿ — ಆದರೂ ಈ ಜೀವ ದೇಹದ ಮೂಲಕ ಸದಾ ಹುಟ್ಟುವವನು ಮತ್ತು ಸಾಯುವವನು ಎಂದು ಭಾವಿಸುವೆಯ? ಹಾಗಿದ್ದರೂ, ಓ ಮಹಾವೀರ, ನೀನು ಇವನಿಗಾಗಿ ಕೊರಗುವುದು ತರವಲ್ಲ.

ವೇದಾಂತ ಬಿಟ್ಟು ಲೋಕದ ದೃಷ್ಟಿಯಲ್ಲಿ ವಿಚಾರ ಮಾಡಿದರೆ, ಆತ್ಮ ದೇಹದ ಮೂಲಕ ವ್ಯಕ್ತವಾಗುತ್ತದೆ ಹಾಗು ಸಾವಿನ ಮೂಲಕ ಅವ್ಯಕ್ತವಾಗುತ್ತದೆ. ಹುಟ್ಟು-ಸಾವನ್ನು ಮೀರಿ ನಿಲ್ಲುವುದು ಎಂದೂ ಸಾಧ್ಯವಿಲ್ಲ. ಆದ್ದರಿಂದ ಸಾವಿನ ಬಗ್ಗೆ ದುಃಖ ಪಡುವ ಅಗತ್ಯವಿಲ್ಲ. ಮಹಾ ಬಲಿಷ್ಟನಾದ ನೀನು ಈ ಹಿಂದೆ ಅದೆಷ್ಟು ಯುದ್ಧಗಳನ್ನು ಮಾಡಿದ್ದಿ? ಆಗ ಇರದ ಸಮಸ್ಯೆ ಈಗೇಕೆ? ನೀನು ಮಾಡುತ್ತಿರುವುದು ನಿನ್ನ ಕರ್ತವ್ಯವನ್ನೇ ಹೊರತು ಇನ್ನೇನನ್ನೂ ಅಲ್ಲ-ಎಂದು ಕೃಷ್ಣ ಅರ್ಜುನನಿಗೆ ತಿಳಿಸಿ ಹೇಳುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *