ಶ್ಲೋಕ – 34
ಅಕೀರ್ತಿಂ ಚಾಪಿ ಭೂತಾನಿ ಕಥಯಿಷ್ಯಂತಿ ತೇSವ್ಯಯಾಮ್ ।
ಸಂಭಾವಿತಸ್ಯ ಚಾಕೀರ್ತಿರ್ಮರಣಾದತಿರಿಚ್ಯತೇ ॥೩೪॥
ಅಕೀರ್ತಿಮ್ ಚ ಅಪಿ ಚಾಪಿ ಭೂತಾನಿ ಕಥಯಿಷ್ಯಂತಿ ತೇ ಅವ್ಯಯಾಮ್ ಸಂಭಾವಿತಸ್ಯ ಚ ಅಕೀರ್ತಿ ಮರಣಾತ್ ಅತಿರಿಚ್ಯತೇ–ಜನರು ನಿನ್ನ ಕೊನೆಯಿರದ ಕಳಂಕದ ಕಥೆಯನ್ನು ಆಡಿಕೊಳ್ಳುತ್ತಾರೆ. ಮರ್ಯಾದೆಯ ಮನುಷ್ಯನಿಗೆ ಕೆಟ್ಟ ಹೆಸರು ಸಾವಿಗಿಂತ ದಾರುಣ.
ಸಾಮಾಜಿಕ ಪರಿಣಾಮದ ಬಗ್ಗೆ ವಿವರಿಸುತ್ತಾ ಕೃಷ್ಣ ಹೇಳುತ್ತಾನೆ: ಒಬ್ಬ ಮರ್ಯಾದಸ್ತ ಮಾನವನಿಗೆ ಆತನ ಕೀರ್ತಿ ನಾಶವಾದರೆ ಆತ ಅವಮಾನಕ್ಕೊಳಗಾಗುತ್ತಾನೆ. ಅದರಿಂದ ಆತ ತನ್ನ ಅಸ್ಥಿತ್ವವನ್ನೇ ಕಳೆದುಕೊಳ್ಳಬಹುದು. ಜಗತ್ತಿನಲ್ಲಿ ಮಹಾನ್ ಬಿಲ್ಲೋಜ ಎನ್ನುವ ಕೀರ್ತಿ ಪಡೆದ ಅರ್ಜುನ ಈ ಧರ್ಮಯುದ್ಧದಲ್ಲಿ ಪಾಲ್ಗೊಳ್ಳದೇ ಇದ್ದಲ್ಲಿ, ಜನರು ಆತನನ್ನು ಹೇಡಿ ಎಂದು ಆಡಿಕೊಳ್ಳುತ್ತಾರೆ. ಇತಿಹಾಸದ ಪುಟಗಳಲ್ಲಿ ಆತನ ಹೇಡಿತನ ಮುಂದಿನ ಪೀಳಿಗೆಗೆ ಕೆಟ್ಟ ಉದಾಹರಣೆಯಾಗಿ ನಿಲ್ಲುತ್ತದೆ. ‘ಬಂಧು ಸ್ನೇಹಕ್ಕಾಗಿ ಯುದ್ಧದಿಂದ ಹಿಂದೆ ಸರಿದ’ ಎಂದು ಯಾರೂ ಹೇಳಲಾರರು. ಯುದ್ಧಕ್ಕೆ ಹೆದರಿ ಓಡಿಹೋದ ಹೇಡಿ ಎಂದು ನೀಚವಾಗಿ ಬಯ್ಯುತ್ತಾರೆ. ಒಬ್ಬ ಮರ್ಯಾದಸ್ತ ಮನುಷ್ಯನಿಗೆ ಅಕೀರ್ತಿ ಎನ್ನುವುದು ಸಾವಿಗಿಂತ ಕೀಳು. ಒಬ್ಬ ಕ್ಷತ್ರಿಯ ಇದನ್ನು ಸಹಿಸಲಾರ