ಶ್ಲೋಕ – 35
ಭಯಾದ್ ರಣಾದುಪರತಂ ಮಂಸ್ಯಂತೇ ತ್ವಾಂ ಮಹಾರಥಾಃ ।
ಯೇಷಾಂ ಚ ತ್ವಂ ಬಹುಮತೋ ಭೂತ್ವಾ ಯಾಸ್ಯಸಿ ಲಾಘವಮ್ ॥೩೫॥
ಭಯಾತ್ ರಣಾತ್ ಉಪರತಮ್ ಮಂಸ್ಯಂತೇ ತ್ವಾಮ್ ಮಹಾರಥಾಃ ಯೇಷಾಮ್ ಚ ತ್ವಮ್ ಬಹುಮತಃ ಭೂತ್ವಾ ಯಾಸ್ಯಸಿ ಲಾಘವಮ್–ಯಾರಿಗೆ ನೀನು ಘನತೆಯ ವ್ಯಕ್ತಿಯಾಗಿದ್ದೆಯೋ ಅಂಥ ಹಿರಿಯ ತೇರಾಳುಗಳೆದುರು ಹಗುರಾಗುವೆ; ಅವರು ನಿನ್ನನ್ನು ಹೆದರಿ ಹೋರಾಡಲು ಹಿಂಜರಿದ ಹೇಡಿ ಎಂದು ಭಾವಿಸುತ್ತಾರೆ.