ಶ್ಲೋಕ – 62
ಧ್ಯಾಯತೋ ವಿಷಯಾನ್ ಪುಂಸಃ ಸಂಗಸ್ತೇಷೂಪಜಾಯತೇ ।
ಸಂಗಾತ್ ಸಂಜಾಯತೇ ಕಾಮಃ ಕಾಮಾತ್ ಕ್ರೋಧೋSಭಿಜಾಯತೇ ॥೬೨॥
ಧ್ಯಾಯತಃ ವಿಷಯಾನ್ ಪುಂಸಃ ಸಂಗಃ ತೇಷು ಉಪಜಾಯತೇ ಸಂಗಾತ್ ಸಂಜಾಯತೇ ಕಾಮಃ ಕಾಮಾತ್ ಕ್ರೋಧಃ ಅಭಿಜಾಯತೇ — ವಿಷಯಗಳನ್ನೆ ನೆನೆಯುತ್ತಿರುವ ಮನುಷ್ಯನಿಗೆ ಅವುಗಳ ನಂಟು ಬೆಳೆಯುತ್ತದೆ. ನಂಟಿನಿಂದ ಆಸೆ ಕುದುರುತ್ತದೆ. ಆಸೆಗೆ ಅಡ್ಡಿಯಾದಾಗ ರೊಚ್ಚು ಮೂಡುತ್ತದೆ.