ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 70

ಆಪೂರ್ಯಮಾಣಮಚಲಪ್ರತಿಷ್ಠಂ ಸಮುದ್ರಮಾಪಃ ಪ್ರವಿಶಂತಿ ಯದ್ವತ್ ।
ತದ್ವತ್ ಕಾಮಾ ಯಂ ಪ್ರವಿಶಂತಿ ಸರ್ವೇ ಸ ಶಾಂತಿಮಾಪ್ನೋತಿ ನ ಕಾಮಕಾಮೀ ॥೭೦॥

ಆಪೂರ್ಯಮಾಣಮ್ ಅಚಲಪ್ರತಿಷ್ಠಮ್ ಸಮುದ್ರಮ್ ಅಪಃ ಪ್ರವಿಶಂತಿ ಯದ್ವತ್ ತದ್ವತ್ ಕಾಮಾಃ ಯಮ್ ಪ್ರವಿಶಂತಿ ಸರ್ವೇ ಸಃ ಶಾಂತಿಮ್ ಅಪ್ನೋತಿ ನ ಕಾಮಕಾಮೀ–ತುಂಬಿದರೂ ತುಳುಕದೆ ನಿಂತ ಕಡಲನ್ನು ಎಲ್ಲ ನೀರುಗಳು ಬಂದು ಸೇರುವಂತೆ, ಯಾರನ್ನು ಎಲ್ಲ ವಿಷಯಗಳು ತುಂಬಿಯೂ ತುಳುಕದಂತೆ ಬಂದು ಸೇರುವವೋ ಅವನು ಮುಕ್ತಿ ಪಡೆಯುತ್ತಾನೆ. ಹೊರತು ಕೆಟ್ಟ ಬಯಕೆಗಳ ಬೆನ್ನು ಹತ್ತಿದವನಲ್ಲ.

ಭಗವಂತನನ್ನು ಕಂಡವನು, ಸತ್ಯದ ಸಾಕ್ಷಾತ್ಕಾರವಾದವನು. ಭಗವಂತನನ್ನು ಕಾಣುವ ಸರಿ ದಾರಿಯಲ್ಲಿ ನಡೆಯುವವನು ಹೇಗಿರುತ್ತಾನೆ ಎನ್ನುವ ವಿಷಯದ ಮೇಲೆ ಕೃಷ್ಣ ಇಲ್ಲಿ ಇನ್ನಷ್ಟು ವಿವರಣೆಯನ್ನು ಕೊಟ್ಟಿದ್ದಾನೆ: ಆತನ ಮನಸ್ಸು ಸದಾ ಆನಂದವಾಗಿರುತ್ತದೆ. ಅದು ಭಗವಂತನಲ್ಲಿ ನೆಲೆಗೊಂಡಿರುತ್ತದೆ. ಆತ ಕಿರು ತೊರೆಗಳಂತೆ ಇರದೆ ಕಡಲಿನಂತಿರುತ್ತಾನೆ. ಸಮುದ್ರಕ್ಕೆ ಎಲ್ಲಾ ನದಿಗಳು ಬಂದು ಸೇರಿದರೂ ಅದು ಉಕ್ಕೇರುವುದಿಲ್ಲ. ಕಡಲು ಮಳೆ ಬಂದಾಗ ಉಕ್ಕಿ ಹರಿದು- ಬೇಸಿಗೆ ಬಂದಾಗ ಬತ್ತಿ ಹೋಗುವುದಿಲ್ಲ. ಅದೇ ರೀತಿ ಸಾಧಕ ಪ್ರಪಂಚದ ಎಲ್ಲಾ ಭೋಗಗಳು ಅವನನ್ನು ಪ್ರವೇಶಿಸಿದರೂ ಕೂಡಾ, ವಿಚಲಿತನಾಗದೆ ಸುಖ-ದುಃಖವನ್ನು ಮೀರಿ ನಿಲ್ಲುತ್ತಾನೆ. ಆತನ ಮನಸ್ಸು ಸದಾ ಪ್ರಸನ್ನವಾಗಿರುತ್ತದೆ. ಆತ ಭಗವಂತನಲ್ಲಿ ನಿಷ್ಠೆಯನ್ನಿಟ್ಟು ಮೋಕ್ಷವನ್ನು ಪಡೆಯುತ್ತಾನೆ. ಆದರೆ ಬಯಕೆಗಳ ಬೆನ್ನು ಹತ್ತಿದವನು ಅದರಿಂದ ಈಚೆ ಬಾರದೆ ಎಂದೂ ನಿಜವಾದ ಸುಖ ಕಾಣಲಾರ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *