ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 8

ನಹಿ ಪ್ರಪಶ್ಯಾಮಿ ಮಮಾಪನುದ್ಯಾದ್
ಯಚ್ಛೋಕಮುಚ್ಛೋಷಣಮಿಂದ್ರಿಯಾಣಾಮ್ ।

ಅವಾಪ್ಯ ಭೂಮಾವಸಪತ್ನಮೃದ್ಧಂ ರಾಜ್ಯಂ ಸುರಾಣಾಮಪಿ ಚಾSಧಿಪತ್ಯಮ್ ॥೮॥

ನ ಹಿ ಪ್ರಪಶ್ಯಾಮಿ ಮಮ ಅಪನುದ್ಯಾತ್ ಯತ್ ಶೋಕಮ್ ಉಚ್ಛೋಷಣಮ್ ಇಂದ್ರಿಯಾಣಾಮ್ ಅವಾಪ್ಯ ಭೂಮೌ ಅಸಪತ್ನಮ್ ಋದ್ಧಮ್ ರಾಜ್ಯಮ್ ಸುರಾಣಾಮ್ ಅಪಿ ಚ ಆಧಿಪತ್ಯಮ್ – ಸತ್ಯ ಸಾರವನ್ನೆಲ್ಲ ಹೀರಿ ಬತ್ತಿಸಿಬಿಡಬಲ್ಲ ನನ್ನ ಈ ದುಗುಡವನ್ನು ದೂರೀಕರಿಸಬಲ್ಲ ದಾರಿಯನ್ನೆ ಕಾಣದವನಾಗಿದ್ದೇನೆ-ಹಗೆಗಳೇ ಇಲ್ಲದ, ಹುಲುಸಾದ ಇಡಿಯ ನೆಲದ ಒಡೆತನ ಪಡೆದರೂ, ಸಗ್ಗಿಗರ ಸಾಮ್ರಾಟನಾದರೂ ಕೂಡಾ.

“ನನ್ನ ಇಂದ್ರಿಯಗಳು ಸೊರಗಿ ಹೋಗುತ್ತಿವೆ. ನನ್ನ ದುಃಖವನ್ನು ಹೊಡೆದೋಡಿಸಲು ನನಗೆ ಮಾರ್ಗವೇ ಕಾಣುತ್ತಿಲ್ಲ. ಭೂಮಿಯಲ್ಲಿ, ಸ್ವರ್ಗದಲ್ಲಿ ಪ್ರಭುತ್ವವನ್ನು ಪಡೆದರೂ ಕೂಡಾ ನಾನು ಈ ದುಃಖವನ್ನು ಹೋಗಲಾಡಿಸಿಕೊಳ್ಳಲಾರೆ” ಎನ್ನುತ್ತಾನೆ ಅರ್ಜುನ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *