ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 02

ಶ್ಲೋಕ – 9

ಸಂಜಯ ಉವಾಚ ।
ಏವಮುಕ್ತ್ವಾ ಹೃಷೀಕೇಶಂ ಗುಡಾಕೇಶಃ ಪರಂತಪಃ ।
ನ ಯೋತ್ಸ್ಯ ಇತಿ ಗೋವಿಂದಮುಕ್ತ್ವಾ ತೂಷ್ಣೀಂ ಬಭೂವ ಹ॥೯॥

ಸಂಜಯ ಉವಾಚ -ಸಂಜಯ ಹೇಳಿದನು:

ಏವಮ್ ಉಕ್ತ್ವಾ ಹೃಷೀಕೇಶಮ್ ಗುಡಾಕೇಶಃ ಪರಂತಪಃ ನ ಯೋತ್ಸ್ಯೇ ಇತಿ ಗೋವಿಂದಮ್ ಉಕ್ತ್ವಾ ತೂಷ್ಣೀಮ್ ಬಭೂವ ಹ- ಅರಿಗಳನ್ನು ತರಿದ, ನಿದ್ದೆಯನ್ನು ಗೆದ್ದ ಅರ್ಜುನ-ಇಂದ್ರಿಯಗಳ ಒಡೆಯನಾದ ಗೋವಿಂದನ ಬಳಿ ಹೀಗೆಂದು- ಮತ್ತೆ ‘ನಾನು ಕಾದಲಾರೆ’ ಎಂದು ಸುಮ್ಮನಾದನು!

ಸಂಜಯ ಯುದ್ಧಭೂಮಿಯಲ್ಲಿ ಅರ್ಜುನನನ ಸ್ಥಿತಿಯನ್ನು ಧೃತರಾಷ್ಟ್ರನಿಗೆ ವರ್ಣಿಸುತ್ತಾ, ಈ ರೀತಿ ಹೇಳುತ್ತಾನೆ: “ಇಡೀ ಬ್ರಹ್ಮಾಂಡದಲ್ಲಿ ತುಂಬಿರುವ ನಮ್ಮ ಇಂದ್ರಿಯಗಳ ಸ್ವಾಮಿ ಗೋವಿಂದನಲ್ಲಿ ನಿದ್ದೆಯನ್ನು ಗೆದ್ದ ಅರ್ಜುನ ‘ನಾನು ಯುದ್ಧ ಮಾಡಲಾರೆ’ ಎಂದು ಹೇಳಿ ಮೌನಿಯಾದ” ಎಂದು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *