ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 10

ಸಹಯಜ್ಞಾಃ ಪ್ರಜಾಃ ಸೃಷ್ಟ್ವಾ ಪುರೋವಾಚ ಪ್ರಜಾಪತಿಃ ।
ಅನೇನ ಪ್ರಸವಿಷ್ಯಧ್ವಮೇಷ ವೋsಸ್ತ್ವಿಷ್ಟಕಾಮಧುಕ್ ॥೧೦॥

ಸಹ ಯಜ್ಞಾಃ ಪ್ರಜಾಃ ಸೃಷ್ಟ್ವಾ ಪುರಾ ಉವಾಚ ಪ್ರಜಾಪತಿಃ ಅನೇನ ಪ್ರಸವಿಷ್ಯಧ್ವಮ್ ಏಷ ವಃ ಅಸ್ತು ಇಷ್ಟ ಕಾಮ ಧುಕ್- ಹಿಂದೆ ಪ್ರಜಾಪತಿ ಭಗವಂತನ ಪೂಜಾ ರೂಪವಾದ ಕರ್ಮದ ಜೊತೆಗೆ ಮಾನವರನ್ನು ಹುಟ್ಟಿಸಿ ಹೀಗೆ ಹೇಳಿದನು: ಇದರಿಂದ ಬೆಳವಣಿಗೆ ಹೊಂದಿ, ಇದು ನಿಮ್ಮ ಬಯಕೆಯನ್ನು ಈಡೇರಿಸಲಿ.

ಹಿಂದೆ ಚತುರ್ಮುಖ- ಚಿಂತನ ಶೀಲ ಮಾನವರನ್ನು ಸೃಷ್ಠಿ ಮಾಡಿ, ಅವರಿಗಾಗಿ ಅವರು ಆಚರಿಸಬೇಕಾದ ಯಜ್ಞವನ್ನು ಸೃಷ್ಠಿ ಮಾಡಿದ. ಹಾಗು ಹೇಳಿದ ” ಈ ಪೂಜಾ ವಿಧಾನದಿಂದ ಬೇಕಾದ್ದನ್ನು ಪಡೆಯಿರಿ. ಇದು ನೀವು ಬಯಸಿದ ಅಭೀಷ್ಟವನ್ನು ಕೊಡುವ ಕಾಮದೇನು” ಎಂದು. ಹಿಂದೆ ಹೇಳಿದಂತೆ ‘ಯಜ್ಞ’ ಎಂದರೆ ‘ದೇವರನ್ನು ಉಪಾಸನೆ ಮಾಡುವ ವಿಧಾನ’; ‘ದಾನ’ ಹಾಗು ‘ಸಂಗತೀಕರಣ’ ಕೂಡಾ ಯಜ್ಞ. ಇಲ್ಲಿ ದಾನ ಎನ್ನುವುದಕ್ಕೆ ವಿಶೇಷ ಅರ್ಥವಿದೆ. ತನ್ನಲ್ಲಿ ಬೇಕಾದಷ್ಟು ಇದ್ದು, ತನಗೆ ಬೇಡವಾದದ್ದನ್ನು ಇನ್ನೊಬ್ಬನಿಗೆ ಕೊಡುವುದು ದಾನವಲ್ಲ. ತನ್ನಲ್ಲಿ ಎರಡು ಹೊತ್ತಿನ ಊಟವಿದ್ದು, ಇನ್ನೊಬ್ಬನಲ್ಲಿ ಒಂದು ಹೊತ್ತಿನ ಊಟ ಕೂಡಾ ಇಲ್ಲದಿದ್ದಾಗ, ಅವನಿಗೆ ತನ್ನಲ್ಲಿರುವ ಊಟವನ್ನು ಕೊಟ್ಟು ಹಂಚಿ ತಿನ್ನುವುದು ನಿಜವಾದ ದಾನ. ಇನ್ನೊಬ್ಬರ ಕಷ್ಟದಲ್ಲಿ ಕರಗುವುದು ನಿಜವಾದ ದಾನ. ಇನ್ನು ಸಂಗತೀಕರಣ ಎಂದರೆ ಜ್ಞಾನಾರ್ಜನೆಗಾಗಿ ಒಂದು ಕಡೆ ಕಲೆಯುವುದು. ಪ್ರವಚನ ಒಂದು ಸಂಗತೀಕರಣ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *