ಶ್ಲೋಕ – 14
ಅನ್ನಾದ್ ಭವಂತಿ ಭೂತಾನಿ ಪರ್ಜನ್ಯಾದನ್ನಸಂಭವಃ ।
ಯಜ್ಞಾದ್ ಭವತಿ ಪರ್ಜನ್ಯೋ ಯಜ್ಞಃ ಕರ್ಮಸಮುದ್ಭವಃ ॥೧೪॥
ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನ ಸಂಭವಃ
ಯಜ್ಞಾತ್ ಭವತಿ ಪರ್ಜನ್ಯಃ ಯಜ್ಞಃ ಕರ್ಮ ಸಮುದ್ಭವಃ -ಜೀವಿಗಳ ಹುಟ್ಟು ಆಹಾರದಿಂದ; ಆಹಾರದ ಬೆಳೆ ಸೂರ್ಯನಿಂದ[ಮೋಡದಿಂದ]. ಸೌರಶಕ್ತಿಯ ವೃದ್ಧಿ [ಮೋಡದ ಹುಟ್ಟು]-ಯಜ್ಞದಿಂದ; ಯಜ್ಞದ ನಿರ್ವಹಣೆ-ಕರ್ಮದಿಂದ.