ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 17

ಯಸ್ತ್ವಾತ್ಮರತಿರೇವ ಸ್ಯಾದಾತ್ಮತೃಪ್ತಶ್ಚ ಮಾನವಃ।
ಆತ್ಮನ್ಯೇವ ಚ ಸಂತುಷ್ಟಸ್ತಸ್ಯ ಕಾರ್ಯಂ ನ ವಿದ್ಯತೇ ॥೧೭॥

ಯಃ ತು ಆತ್ಮ ರತಿಃ ಏವ ಸ್ಯಾತ್ ಆತ್ಮ ತೃಪ್ತಃ ಚ ಮಾನವಃ ಆತ್ಮನಿ ಏವ ಚ ಸಂತುಷ್ಟ ತಸ್ಯ ಕಾರ್ಯಮ್ ನ ವಿದ್ಯತೇ- ಪರಮಾತ್ಮನನ್ನು ಕಂಡು (ಪರಮಾತ್ಮನ ಕರುಣೆಯಿಂದ) ಸುಖವುಂಡವನು, ಪರಮಾತ್ಮನ ಕಾಣ್ಕೆಯಿಂದ(ಕರುಣೆಯಿಂದ) ಕೃತಕೃತ್ಯನಾದವನು, ಬೇರಾವುದೂ ಬೇಡವನಿಸಿ ಪರಮಾತ್ಮನಲ್ಲೆ ಆನಂದವಾಗಿರುವ ಸಮಾಧಿಮಗ್ನನು(ತೃಪ್ತನಾಗುವ ಮುಕ್ತನು) ಮಾತ್ರವೇ ಮಾಡಬೇಕಾದ್ದೇನೂ ಇರುವುದಿಲ್ಲ.

ಭಗವಂತನನ್ನು ಅಂತರಂಗದಲ್ಲಿ ಕಂಡು ಪಡುವ ಆನಂದ ‘ಆತ್ಮರತಿ’. ಈ ಸ್ಥಿತಿಯನ್ನು ಸಮಾಧಿ ಸ್ಥಿತಿಯಲ್ಲಿ ತಲುಪಬಹುದು. ನಿಜವಾದ ಸಮಾಧಿ ಸ್ಥಿತಿಯಲ್ಲಿ ನಮ್ಮ ಇಂದ್ರಿಯಗಳು ಮತ್ತು ಮನಸ್ಸು ಕೆಲಸ ಮಾಡುವುದಿಲ್ಲ. ಜ್ಞಾನ ಸ್ವರೂಪವಾದ ‘ಜೀವಸ್ವರೂಪ’ ನೇರವಾಗಿ ಭಗವಂತನನ್ನು ಕಾಣುವ ಸ್ಥಿತಿ ‘ಸಮಾಧಿಸ್ಥಿತಿ’. ಈ ಸ್ಥಿತಿಯಲ್ಲಿ ಭಗವಂತನೊಡನೆ ನೇರ ಸಂಪರ್ಕ ಸಾಧ್ಯ. ಇಂತಹ ಸ್ಥಿತಿಯಲ್ಲಿರುವವನಿಗೆ ಯಾವುದೇ ಕರ್ಮದ ಲೇಪವಿಲ್ಲ. ದೇವರನ್ನು ಕಂಡ ಮೇಲೆ ಆತನಿಗೆ ಈ ಲೌಕಿಕ ಪ್ರಪಂಚ ತೃಪ್ತಿಯಾಗಿ ಅದು ಬೇಡವೆನಿಸುತ್ತದೆ. ಕೇವಲ ಭಗವಂತನ ಸಾಕ್ಷಾತ್ಕಾರದ ಆನಂದ ಸಾಗರದಲ್ಲಿ ಆತ ಮುಳುಗಿರುತ್ತಾನೆ. ಈ ಸ್ಥಿತಿಯಲ್ಲಿ ಆತನಿಗೆ ಯಾವುದೇ ಕರ್ತವ್ಯ ಕರ್ಮವಿಲ್ಲ, ಆತ ವಿಧಿ ನಿಷೇಧಗಳಿಂದ ಅತೀತನಾಗಿರುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *