ಶ್ಲೋಕ – 18
ನೈವ ತಸ್ಯ ಕೃತೇನಾರ್ಥೋ ನಾಕೃತೇನೇಹ ಕಶ್ಚನ ।
ನ ಚಾಸ್ಯ ಸರ್ವಭೂತೇಷು ಕಶ್ಚಿದರ್ಥವ್ಯಪಾಶ್ರಯಃ ॥೧೮॥
ನ ಏವ ತಸ್ಯ ಕೃತೇನ ಅರ್ಥಃ ನ ಅಕೃತೇನ ಇಹ ಕಶ್ಚನ ನ ಚ ಅಸ್ಯ ಸರ್ವಭೂತೇಷು ಕಶ್ಚಿತ್ ಅರ್ಥ ವ್ಯಪಾಶ್ರಯಃ -ಅಂಥವನು ಏನನ್ನಾದರೂ ಮಾಡುವುದರಿಂದ ಹೆಚ್ಚಿನ ಸಾಧಕವಾಗಲಿ, ಮಾಡದೆ ಇರುವುದರಿಂದ ಯಾವುದೇ ಬಾದಕವಾಗಲಿ ಇಲ್ಲ. ಸಮಸ್ತ ಜೀವಿಗಳಲ್ಲಿ ಅವನಿಗೆ ಯಾವುದೇ ಫಲದ ಹಂಗಿಲ್ಲ.
ಸಮಾಧಿ ಸ್ಥಿತಿಯಲ್ಲಿ ಅವನಿಗೆ ಹಸಿವು, ಬಾಯಾರಿಕೆ ಇಲ್ಲ. ಆತನಿಗೆ ಹೊರ ಪ್ರಪಂಚದ ಅರಿವೇ ಇರುವುದಿಲ್ಲ. ಇಂತಹ ಸ್ಥಿತಿಯಲ್ಲಿರುವಾಗ ಇನ್ಯಾವುದೋ ಸಾಧನೆ ಮಾಡುವುದರಿಂದ ಉದ್ಧಾರವಾಗಲಿ, ಕರ್ತವ್ಯ ಕರ್ಮ ಮಾಡದೆ ಇರುವ ದೋಷವಾಗಲಿ ಇರುವುದಿಲ್ಲ. ಪಂಚಭೂತಗಳ, ಪಂಚಕೋಶಗಳ ಆಸರೆ ಕೂಡಾ ಅವನಿಗೆ ಬೇಕಾಗಿರುವುದಿಲ್ಲ. ಸಮಸ್ತ ಜನಾಂಗ, ಪರಿವಾರ ಎನ್ನುವ ಮಮಕಾರ ಈ ಸ್ಥಿತಿಯಲ್ಲಿ ಇರುವುದಿಲ್ಲ. ಆತನಿಗೆ ಹೊರ ಪ್ರಪಂಚದ ಹಂಗಿಲ್ಲ. ಈ ರೀತಿ ಸಮಾಧಿ ಸ್ಥಿತಿಯಿಂದ ದೇವರನ್ನು ಕಾಣುತ್ತಿರುವವನು ಕರ್ತವ್ಯ ಕರ್ಮದಿಂದ ಆಚೆಗಿರುತ್ತಾನೆ.