ಶ್ಲೋಕ – 23
ಯದಿ ಹ್ಯಹಂ ನ ವರ್ತೇಯಂ ಜಾತು ಕರ್ಮಣ್ಯತಂದ್ರಿತಃ ।
ಮಮ ವರ್ತ್ಮಾನುವವರ್ತಂತೇ ಮನುಷ್ಯಾಃ ಪಾರ್ಥ ಸರ್ವಶಃ ॥೨೩॥
ಯದಿ ಹಿ ಅಹಮ್ ನ ವರ್ತೇಯಮ್ ಜಾತು ಕರ್ಮಣಿ ಅತಂದ್ರಿತಃ
ಮಮ ವರ್ತ್ಮ ಅನುವವರ್ತಂತೇ ಮನುಷ್ಯಾಃ ಪಾರ್ಥ ಸರ್ವಶಃ –ಓ ಪಾರ್ಥ, ನಾನು ಎಂದಾದರೂ ಎಚ್ಚರದಿಂದ ಕರ್ಮದಲ್ಲಿ ತೊಡಗದೆ ಹೋದರೆ, ಮನುಷ್ಯರು ಎಲ್ಲ ಬಗೆಯಿಂದಲೂ ನನ್ನ ದಾರಿ ಹಿಡಿದು ಬಿಡುತ್ತಾರೆ.