ಶ್ಲೋಕ – 25
ಸಕ್ತಾಃ ಕರ್ಮಣ್ಯವಿದ್ವಾಂಸೋ ಯಥಾ ಕುರ್ವಂತಿ ಭಾರತ।
ಕುರ್ಯಾದ್ ವಿದ್ವಾಂಸ್ತಥಾsಸಕ್ತಶ್ಚಿಕೀರ್ಷುರ್ಲೋಕಸಂಗ್ರಹಮ್ ॥೨೫॥
ಸಕ್ತಾಃ ಕರ್ಮಣಿ ಅವಿದ್ವಾಂಸಃ ಯಥಾ ಕುರ್ವಂತಿ ಭಾರತ
ಕುರ್ಯಾತ್ ವಿದ್ವಾನ್ ತಥಾ ಅಸಕ್ತಃ ಚಿಕೀರ್ಷುಃ ರ್ಲೋಕ ಸಂಗ್ರಹಮ್ -ಓ ಭಾರತ, ತಿಳಿಯದ ಮಂದಿ ಫಲದ ನಂಟಿಗಾಗಿ ಕರ್ಮಗಳನ್ನು ಮಾಡುತ್ತಾರೆ ಹೇಗೆ, ಹಾಗೇ ತಿಳಿದವನೂ ಕರ್ಮ ಮಾಡುತ್ತಿರಬೇಕು-ಫಲದ ನಂಟು ತೊರೆದು, ಸಮಾಜವನ್ನು ತಿದ್ದುವುದಕ್ಕಾಗಿ.
ತಿಳುವಳಿಕೆ ಇಲ್ಲದವರು ಫಲಾಪೇಕ್ಷೆಯಿಂದ ಕರ್ಮ ಮಾಡುತ್ತಾರೆ. ಆದರೆ ತಿಳಿದವನು, ಜ್ಞಾನಿ, ಯಾವುದೇ ಫಲದ ಅಧಿಕಾರ ಸಾಧಿಸದೆ, ನಿಷ್ಕಾಮ ಕರ್ಮ ಮಾಡುತ್ತಿರಬೇಕು. “ನಾನು ನನ್ನ ಕಣ್ಮಂದೆ ಬೆಳೆಯುತ್ತಿರುವ ಜನಾಂಗಕ್ಕೆ ಮಾರ್ಗದರ್ಶನವಾಗಿ ಭಗವಂತನ ಸೇವೆ ಮಾಡುತ್ತಿದ್ದೇನೆ, ನನಗೆ ಇದರಿಂದ ಭಗವಂತ ಏನು ಕೊಟ್ಟರೂ ಸಂತೋಷ” ಎಂಬ ಸಂಕಲ್ಪದಿಂದ ಕರ್ಮ ಮಾಡಬೇಕು ಇದು ನಿಜವಾದ ಕರ್ಮಯೋಗ.