ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 03

ಶ್ಲೋಕ – 26

ನ ಬುದ್ಧಿಭೇದಂ ಜನಯೇದಜ್ಞಾನಾಮ್ ಕರ್ಮಸಂಗಿನಾಮ್ ।
ಜೋಷಯೇತ್ ಸರ್ವಕರ್ಮಾಣಿ ವಿದ್ವಾನ್ ಯುಕ್ತಃ ಸಮಾಚರನ್ ॥೨೬॥

ನ ಬುದ್ಧಿ ಭೇದಮ್ ಜನಯೇತ್ ಅಜ್ಞಾನಾಮ್ ಕರ್ಮ ಸಂಗಿನಾಮ್

ಜೋಷಯೇತ್ ಸರ್ವ ಕರ್ಮಾಣಿ ವಿದ್ವಾನ್ ಯುಕ್ತಃ ಸಮಾಚರನ್–ತಿಳುವಳಿಕೆಯಿಲ್ಲದೆ ಫಲದ ನಂಟಿಗಾಗಿಯೇ ಕರ್ಮ ಮಾಡುವ ಮಂದಿಯ ನಂಬಿಕೆಯನ್ನು ನಲುಗಿಸಬಾರದು. ಉಪಾಯ ಬಲ್ಲ ತಿಳಿದವನು ತಾನು ಎಲ್ಲಾ ಕರ್ಮಗಳನ್ನು ಮಾಡುತ್ತ ಅವರನ್ನು ಒಲೈಸಬೇಕು.

ಸಮಾಜದಲ್ಲಿ ಅನೇಕ ತರದ ಜನರಿರುತ್ತಾರೆ. ಎಲ್ಲರಿಗೂ ತಿಳುವಳಿಕೆ ಇರುವುದಿಲ್ಲ. ಅವರು ಅವರ ನಂಬಿಕೆಗೆ ತಕ್ಕಂತೆ ನೆಡೆದುಕೊಳ್ಳುತ್ತಿರುತ್ತಾರೆ. ತಿಳಿದವನಿಗೆ ಅದು ಮೂಢನಂಬಿಕೆಯಾಗಿ ಕಾಣಬಹುದು. ಆದರೆ ಎಂದೂ ಒಮ್ಮೆಗೆ ಹೋಗಿ ಅಂತಹ ಜನರನ್ನು ಪರಿಹಾಸ್ಯ ಮಾಡಬಾರದು. ಒಬ್ಬ ಒಂದು ಕಲ್ಲನ್ನು ಅದಕ್ಕೊಂದು ಹೆಸರನ್ನು ಕೊಟ್ಟು ದೇವರೆಂದು ಪೂಜಿಸುತ್ತಿರಬಹುದು. ಆತನ ಅಪಾರ ನಂಬಿಕೆ ಶರಣಾಗತಿ ಆತನನ್ನು ರಕ್ಷಿಸುತ್ತಿರುತ್ತದೆ. ಇದನ್ನು ನೋಡಿ ಪರಿಹಾಸ್ಯ ಮಾಡುವುದು ಮೂಢತನ. ಅವರು ಇಂತಹ ನಂಬಿಕೆಯ ನೆಲಗಟ್ಟಿನಲ್ಲಿ ಜೀವನದಲ್ಲಿ ಭರವಸೆಯಿಂದ ಬದುಕುತ್ತಿರುತ್ತಾರೆ.ಅವರಿಗೊಂದು ಸನಾತನ ಪ್ರಜ್ಞೆ ಇರುತ್ತದೆ. ಸರ್ವಗತ, ಸರ್ವಶಬ್ದವಾಚ್ಯ ಹಾಗು ಸರ್ವಶಕ್ತ ಭಗವಂತ ಆತನಿಗೆ ಕಲ್ಲಿನ ಮುಖೇನ ರಕ್ಷಣೆ ಕೊಡಲೂ ಸಾಧ್ಯವಿದೆಯಲ್ಲವೇ? ಆದ್ದರಿಂದ ಎಂದೂ ಅಂತವರನ್ನು ನೋಡಿ ನಗಬಾರದು. ಅದನ್ನು ಬಿಟ್ಟು ಅವನನ್ನು ಕ್ರಮೇಣವಾಗಿ ಜ್ಞಾನದ ಪರಿದಿಗೆ ತರುವ ಪ್ರಯತ್ನವನ್ನು ಮಾಡಬೇಕು. ಎಲ್ಲವನ್ನು ಸಾಮಾಜಿಕ ಕಾಳಜಿಯಿಂದ ಮಾಡಬೇಕು, ಆದರೆ ನಿರ್ಲಿಪ್ತನಾಗಿ ಎಲ್ಲಾ ಕರ್ಮವನ್ನು ಮಾಡುತ್ತಾ ಅಜ್ಞಾನಿಗಳಲ್ಲಿ ಜ್ಞಾನವನ್ನು ತುಂಬಬೇಕು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *