ಶ್ಲೋಕ – 16
ಕಿಂ ಕರ್ಮ ಕಿಮಕರ್ಮೇತಿ ಕವಯೋSಪ್ಯತ್ರ ಮೋಹಿತಾಃ ।
ತತ್ ತೇ ಕರ್ಮ ಪ್ರವಕ್ಷ್ಯಾಮಿ ಯಜ್ ಜ್ಞಾತ್ವಾ ಮೋಕ್ಷ್ಯಸೇSಶುಭಾತ್ ॥೧೬॥
ಕಿಮ್ ಕರ್ಮ ಕಿಮ್ ಅಕರ್ಮ ಇತಿ ಕವಯಃ ಅಪಿ ಅತ್ರ ಮೋಹಿತಾಃ
ತತ್ ತೇ ಕರ್ಮ ಪ್ರವಕ್ಷ್ಯಾಮಿ ಯತ್ ಜ್ಞಾತ್ವಾ ಮೋಕ್ಷ್ಯಸೇ ಅಶುಭಾತ್-ಯಾವುದು ಕರ್ಮ, ಯಾವುದು ಅಕರ್ಮ ಎಂಬಲ್ಲಿ ಬಲ್ಲವರು ಗಲಿಬಿಲಿಗೊಳ್ಳುತ್ತಾರೆ. ಅಂಥ ಕರ್ಮವನ್ನು ನಿನಗೆ ತಿಳಿಹೇಳುತ್ತೇನೆ. ಅದನ್ನು ಅರಿತು ನೀನು ಕೇಡಿನಿಂದ ಪಾರಾಗುವೆ.