ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 04

ಶ್ಲೋಕ – 40

ಅಜ್ಞಶ್ಚಾಶ್ರದ್ದಧಾನಶ್ಚ ಸಂಶಯಾತ್ಮಾ ವಿನಶ್ಯತಿ ।
ನಾಯಂ ಲೋಕೋSಸ್ತಿ ನ ಪರೋ ನ ಸುಖಂ ಸಂಶಯಾತ್ಮನಃ॥೪೦॥

ಅಜ್ಞಃ ಚ ಅಶ್ರದ್ದಧಾನಃ ಚ ಸಂಶಯ ಆತ್ಮಾ ವಿನಶ್ಯತಿ

ನ ಅಯಮ್ ಲೋಕಃ ಅಸ್ತಿ ನ ಪರಃ ನ ಸುಖಮ್ ಸಂಶಯ ಆತ್ಮನಃ -ಅರಿವಿರದ, ನಂಬಿಕೆ ಕಳೆದುಕೊಂಡ ಇಬ್ಬಂದಿ ವಿನಾಶದತ್ತ ಸಾಗುತ್ತಾನೆ. ಇಬ್ಬಂದಿಗೆ ಇಹವಿಲ್ಲ; ಪರವಿಲ್ಲ; ನೆಮ್ಮದಿಯೂ ಇಲ್ಲ.

ಜ್ಞಾನವಿಲ್ಲದ, ಶ್ರದ್ಧೆ ಇಲ್ಲದ ಅಜ್ಞಾನಿಗಳು ನಿರಂತರ ಸಂಶಯದಲ್ಲೇ ಬದುಕುತ್ತಾರೆ. ಜ್ಞಾನ ಮತ್ತು ಶ್ರದ್ಧೆ ಇಲ್ಲದಾಗ ಅಲ್ಲಿ ಸಂಶಯ ಬೆಳೆಯಲಾರಂಭಿಸುತ್ತದೆ. ಆ ಸಂಶಯ ಮನಸ್ಸನ್ನು ಆಕ್ರಮಿಸಿ ನಂತರ ಚಿತ್ತವನ್ನು ತಲುಪುತ್ತದೆ. ಬುದ್ಧಿಗೆ ಬಂದ ಸಂಶಯಕ್ಕೆ ಪರಿಹಾರವಿಲ್ಲ. ಅದು ನಮ್ಮನ್ನು ಅಧಃಪಾತಕ್ಕೆ ಕೊಂಡೊಯ್ಯುತ್ತದೆ. ಇದರಿಂದ ಅಂತವರಿಗೆ ಇಹವಿಲ್ಲ, ಪರವಿಲ್ಲ, ಎಂದೆಂದೂ ನೆಮ್ಮದಿ ಇಲ್ಲ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

One comment

  1. ಬಲರಾಮ ಮೈಯ್ಯ ಬಿಜೂರು

    ದಯಮಾಡಿ ಭಗವದ್ಗೀತೆಯ ಅಧ್ಯಾಯ 14, 15 ,16 17, 18,ನ್ನು ಹಾಕಿ( ಅರ್ಥದಲ್ಲಿ ಸಹಿತ )
    13ರ ವರೆಗೆ ಓದಿದ್ದೆ ಚೆನ್ನಾಗಿದೆ.ಧನ್ಯವಾದಗಳು.ನಮಸ್ಕಾರ.

Leave a Reply

Your email address will not be published. Required fields are marked *