ಶ್ಲೋಕ – 42
ತಸ್ಮಾದಜ್ಞಾನಸಂಭೂತಂ ಹೃತ್ ಸ್ಥಂ ಜ್ಞಾನಾಸಿನಾSSತ್ಮನಃ ।
ಛಿತ್ವೈನಂ ಸಂಶಯಂ ಯೋಗಮಾತಿಷ್ಠೋತ್ತಿಷ್ಠ ಭಾರತ ॥೪೨॥
ತಸ್ಮಾತ್ ಅಜ್ಞಾನ ಸಂಭೂತಮ್ ಹೃತ್ ಸ್ಥಮ್ ಜ್ಞಾನ ಅಸಿನಾ ಆತ್ಮನಃ ।
ಛಿತ್ವೈನಮ್ ಸಂಶಯಮ್ ಯೋಗಮ್ ಆತಿಷ್ಠ ಉತ್ತಿಷ್ಠ ಭಾರತ-ಆದ್ದರಿಂದ, ಓ ಭಾರತ, ಅಜ್ಞಾನದಿಂದ ಹುಟ್ಟಿ ಬಗೆಯೊಳಹೊಕ್ಕು ನಿಂತ ನಿನ್ನ ಈ ಸಂದೇಹವನ್ನು ತಿಳಿವಿನ ಕತ್ತಿಯಿಂದ ಕತ್ತರಿಸಿ ಜ್ಞಾನದ ದಾರಿಯಲ್ಲಿ ನಡೆ; ಎದ್ದು ನಿಲ್ಲು.
“ಆದ್ದರಿಂದ ಎದ್ದು ನಿಲ್ಲು, ಭರತ ಚಕ್ರವರ್ತಿಯಂತಹ ಮಹಾ ಪುರುಷರು ಹುಟ್ಟಿ ಬಂದ ವಂಶದವನಾದ ನೀನು ಜ್ಞಾನ ಸ್ವರೂಪನಾದ ಭಗವಂತನ ಭಕ್ತಿಯಲ್ಲಿ ನಿರತನಾದ ಜ್ಞಾನಿ(ಭಾರತ); ನಿನ್ನ ಮನಸ್ಸಿನಲ್ಲಿ ಕುಳಿತಿರುವ ಸಂಶಯವನ್ನು ಭಗವಂತನೆನ್ನುವ ಜ್ಞಾನ ಕತ್ತಿಯಿಂದ ಕಡಿದು ಹಾಕು. ಅನ್ಯಾಯದ ವಿರುದ್ಧ ಹೋರಾಟ ಭಗವಂತನ ಪೂಜೆ ಎನ್ನುವ ಧೀಕ್ಷೆ ತೊಟ್ಟು, ಸತ್ಯದ, ಪ್ರಾಮಾಣಿಕತೆಯ ಬದುಕನ್ನು ಬದುಕುವುದಕ್ಕೊಸ್ಕರ ಪುಣ್ಯದ ಸಾಧನೆಯಲ್ಲಿ ತೊಡಗು” ಎನ್ನುತ್ತಾನೆ ಕೃಷ್ಣ.
ಇತಿ ಚತುರ್ಥೋSಧ್ಯಾಯಃ
ನಾಲ್ಕನೆಯ ಅಧ್ಯಾಯ ಮುಗಿಯಿತು.