ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 04

ಶ್ಲೋಕ – 05

ಭಗವಾನುವಾಚ ।
ಬಹೂನಿ ಮೇ ವ್ಯತೀತಾನಿ ಜನ್ಮಾನಿ ತವ ಚಾರ್ಜುನ ।
ತಾನ್ಯಹಂ ವೇದ ಸರ್ವಾಣಿ ನ ತ್ವಂ ವೇತ್ಥ ಪರಂತಪ ॥೫॥

ಭಗವಾನ್ ಉವಾಚ-ಭಗವಂತ ಹೇಳಿದನು : ಬಹೂನಿ ಮೇ ವ್ಯತೀತಾನಿ ಜನ್ಮಾನಿ ತವ ಚ ಅರ್ಜುನ |

ತಾನಿ ಅಹಮ್ ವೇದ ಸರ್ವಾಣಿ ನ ತ್ವಮ್ ವೇತ್ಥ ಪರಂತಪ-ಓ ಅರ್ಜುನ, ನನಗೆ ಹಲವಾರು ಹುಟ್ಟುಗಳು ಆಗಿ ಹೋದವು. ನಿನಗೆ ಕೂಡಾ. ಓ ಅರಿಗಳನ್ನು ತರಿದವನೆ, ಅವನ್ನೆಲ್ಲ ನಾನು ಬಲ್ಲೆ- ಆದರೆ ನಿನಗೆ ಗೊತ್ತಿಲ್ಲ.

ಜನ್ಮ ಅಂದರೆ ಜನನ ಅಥವಾ ಹುಟ್ಟುವುದು. ಇಲ್ಲದೇ ಇರುವುದು ಹುಟ್ಟುವುದಿಲ್ಲ. ಜಡವನ್ನು ಹುಟ್ಟಿತು ಎಂದು ನಾವು ಕರೆಯುವುದಿಲ್ಲ. ಸೂಕ್ಷ್ಮ ಶರೀರದಿಂದ ಸ್ಥೂಲ ಶರೀರದಲ್ಲಿ ಕಾಣಿಸಿಕೊಳ್ಳುವುದು ಜನನ. ಸಾಯುವುದು ಅಂದರೆ ಸೂಕ್ಷ್ಮಶರೀರ ಸ್ಥೂಲಶರೀರವನ್ನು ತೈಜಿಸುವುದು. ಇಲ್ಲಿ ಕೃಷ್ಣ ಹೇಳುತ್ತಾನೆ: “ನನಗೆ ಹಾಗು ನಿನಗೆ ಅನೇಕ ಹುಟ್ಟುಗಳು ಆಗಿ ಹೋದವು. ನನಗೆ ಅದು ತಿಳಿದಿದೆ ಆದರೆ ಪರಂತಪನಾದ ನಿನಗೂ ಈ ವಿಚಾರ ತಿಳಿದಿಲ್ಲ” ಎಂದು.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *