ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 05

ಶ್ಲೋಕ – 24

ಯೋSನ್ತಃ ಸುಖೋSನ್ತರಾರಾಮಸ್ತಥಾSನ್ತರ್ಜ್ಯೋತಿರೇವ ಯಃ ।
ಸ ಯೋಗೀ ಬ್ರಹ್ಮ ನಿರ್ಬಾಣಂ ಬ್ರಹ್ಮಭೂತೋSಧಿಗಚ್ಛತಿ ॥೨೪॥

ಯಃ ಅಂತಃ ಸುಖಃ ಅಂತಃ ಆರಾಮಃ ತಥಾ ಅಂತಃ ಜ್ಯೋತಿಃ ಏವ ಯಃ ।

ಸಃ ಯೋಗೀ ಬ್ರಹ್ಮ ನಿರ್ಬಾಣಂ ಬ್ರಹ್ಮಭೂತಃ ಅಧಿಗಚ್ಛತಿ-ಬಯಕೆಯಳಿದು ಒಳಬಗೆಯ ಸುಖ ಕಂಡವನು , ಭಗವಂತನನ್ನು ಕಂಡು ಒಳಗೊಳಗೇ ಖುಷಿಗೊಂಡವನು, ಭಗವಂತನ ಬೆಳಕನ್ನೆ ಒಳಗೆಲ್ಲ ತುಂಬಿಕೊಂಡವನು, ಭಗವಂತನಲ್ಲೆ ನೆಲೆ ನಿಂತ ಇಂಥ ಸಾಧಕ ಅಳಿವಿರದ ಮೈ ತಳೆದ ಭಗವಂತನನ್ನೇ ಸೇರುತ್ತಾನೆ.

ಮನುಷ್ಯ ಸುಖ ಬೇಕು ಎಂದು ಬಯಸದೆ ಅಂತಃಸುಖ ಬೇಕು ಎಂದು ಬಯಸಬೇಕು. ಈ ಶ್ಲೋಕದಲ್ಲಿ ‘ಸುಖ’ ಮತ್ತು ‘ಆರಾಮ’ ಎನ್ನುವ ಎರಡು ಶಬ್ದಗಳು ಬಳಕೆಯಾಗಿವೆ. ಈ ಎರಡು ಶಬ್ದಗಳ ನಡುವೆ ಸೂಕ್ಷ್ಮ ವೆತ್ಯಾಸವಿದೆ. ನಮ್ಮ ಬಯಕೆಗಳು ಈಡೇರುವುದು ಅಥವಾ ಬಯಸಿದ್ದು ಸಿಕ್ಕಿದಾಗ ಆಗುವುದು ‘ಆರಾಮ’ ; ಬಯಕೆಗಳೇ ಇಲ್ಲದಿರುವುದು ಸುಖ. ಯಾವುದೋ ಕೊರತೆ, ತೊಂದರೆ, ಕಷ್ಟ ಪರಿಹಾರವಾದಾಗ, ಯಾವುದೋ ತಾಪತ್ರಯದಿಂದ ಪಾರಾದಾಗ ಆಗುವುದು ಸುಖ. ಇಲ್ಲಿ ಕೃಷ್ಣ ಹೇಳುತ್ತಾನೆ “ಅಧ್ಯಾತ್ಮ ಯೋಗದ ಸಾಧಕ, ಸಾಧನೆ ಮಾಡಿ ಫಲ ಪಡೆದವನು- ಮಾನಸಿಕವಾಗಿ ಭಗವಂತನಲ್ಲೇ ನೆಲೆಸಿರುತ್ತಾನೆ. ಆತ ಒಳಗಿಂದೊಳಗೆ ಆರಾಮವಾಗಿರುತ್ತಾನೆ” ಎಂದು. ಅಂತರಂಗದಲ್ಲಿ ಭಗವಂತನನ್ನು ನೋಡುತ್ತಾ ಆರಾಮವಾಗಿರುವುದು. ಕಾಮ ಕ್ರೋಧವನ್ನು ಬಿಟ್ಟು ಸುಖಪಡುವುದು. ಸಾಧಕ ತನ್ನೊಳಗಿರುವ ಆ ಜ್ಯೋತಿಯನ್ನು ಅರಿತು ತನ್ನೊಳಗಿರುವ ಆ ಮಹಾ ಬೆಳಕಾದ ಭಗವಂತನನ್ನು ಕಂಡು ಭಗವಂತನಲ್ಲೇ ನೆಲೆಸಿಬಿಡುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *