ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 05

ಶ್ಲೋಕ – 25

ಲಭಂತೇ ಬ್ರಹ್ಮನಿರ್ಬಾಣಮೃಷಯಃ ಕ್ಷೀಣಕಲ್ಮಷಾಃ ।
ಛಿನ್ನದ್ವೈಧಾಯತಾತ್ಮಾನಃ ಸರ್ವಭೂತಹಿತೇ ರತಾಃ ॥೨೫॥

ಲಭಂತೇ ಬ್ರಹ್ಮನಿರ್ಬಾಣಮ್ ಋಷಯಃ ಕ್ಷೀಣ ಕಲ್ಮಷಾಃ ।

ಛಿನ್ನ ದ್ವೈಧಾಃ ಯತಆತ್ಮಾನಃ ಸರ್ವಭೂತಹಿತೇ ರತಾಃ –ಕೊಳೆಗಳನೆಲ್ಲ ಕಳೆದು, ಇಬ್ಬಂದಿತನವಳಿದು ತಿಳಿವಿನ ಕೊಳವಾದವರು.[ಬಗೆಯನ್ನು ಹದಗೊಳಿಸಿದವರು], ಎಲ್ಲ ಜೀವಿಗಳಿಗು ಒಳಿತನ್ನೆ ಬಯಸುವ ಬಲ್ಲವರು ನಿತ್ಯ ಸ್ವರೂಪನಾದ ಭಗವಂತನನ್ನೇ ಪಡೆಯುತ್ತಾರೆ.

ತನ್ನಲ್ಲಿ ಉದ್ಭವವಾಗುವ ಸಂದೇಹವನ್ನು, ದ್ವಂದ್ವವನ್ನು ಮೀರಿ ನಿಂತವರು ನಿಜವಾದ ಸಾಧಕರು. ಇವರು ಸದಾ ತಮ್ಮ ಮನಸ್ಸನ್ನು ಅಂತರಂಗದಲ್ಲಿ ನೆಲೆಗೊಳಿಸಿರುತ್ತಾರೆ. ಇವರು ಬಯಸುವ ಸುಖ ‘ಅಂತರಂಗದ ಸುಖ’. ಬಾಹ್ಯ ಸುಖದ ಬೆನ್ನುಹತ್ತದೆ, ಎಲ್ಲ ಜೀವಿಗಳಿಗೆ ಒಳಿತನ್ನೇ ಬಯಸುವ ಇವರು ಸದಾ ನಿತ್ಯ ಸ್ವರೂಪನಾದ ಭಗವಂತನಲ್ಲೇ ನೆಲಸಿ ಅವನನ್ನೇ ಸೇರುತ್ತಾರೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *