ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 05

ಶ್ಲೋಕ – 05

ಯತ್ ಸಂಖ್ಯೈಃ ಪ್ರಾಪ್ಯತೇ ಸ್ಥಾನಂ ತದ್ ಯೊಗೈರಪಿ ಗಮ್ಯತೇ ।
ಏಕಂ ಸಾಂಖ್ಯಂ ಚ ಯೋಗಂ ಚ ಯಃ ಪಶ್ಯತಿ ಸ ಪಶ್ಯತಿ ॥೫॥

ಯತ್ ಸಂಖ್ಯೈಃ ಪ್ರಾಪ್ಯತೇ ಸ್ಥಾನಮ್ ತತ್ ಯೋಗ್ಯೆಃ ಅಪಿ ಗಮ್ಯತೇ ।

ಏಕಮ್ ಸಾಂಖ್ಯಮ್ ಚ ಯೋಗಮ್ ಚ ಯಃ ಪಶ್ಯತಿ ಸಃ ಪಶ್ಯತಿ-ಜ್ಞಾನ ಯೋಗಿಗಳು ಪಡೆಯುವ ತಾಣದೆಡೆ ಕರ್ಮ ಯೋಗಿಗಳೂ ನಡೆಯುತ್ತಾರೆ. ಜ್ಞಾನ ಮತ್ತು ಕರ್ಮದ ದಾರಿಗಳ ಗುರಿ ಒಂದೆ ಎಂದು ತಿಳಿದವನೆ ನಿಜವಾಗಿ ತಿಳಿದವನು.

ಜ್ಞಾನಿಗಳು ತಮಗೋಸ್ಕರ ಅಲ್ಲದೆ ಲೋಕಕ್ಕೆ ಮಾರ್ಗದರ್ಶನ ಮಾಡುವ ಸಲುವಾಗಿಯೂ ಕರ್ಮ ಮಾಡಬೇಕಾಗುತ್ತದೆ. ಏಕೆಂದರೆ ಸಮಾಜ ಅವರನ್ನು ಅನುಸರಿಸುತ್ತದೆ. ಇದು ಅವರ ಮೇಲಿರುವ ಸಾಮಾಜಿಕ ಜವಾಬ್ದಾರಿ. ಆದ್ದರಿಂದ ಜ್ಞಾನ ಮತ್ತು ಕರ್ಮ ಒಂದಕ್ಕೊಂದು ಪೂರಕ. ಜ್ಞಾನಪ್ರದ ಮತ್ತು ಕರ್ಮಪ್ರದ ಈ ಮಾರ್ಗದ ಗುರಿ ಒಂದೆ. ಜ್ಞಾನಪ್ರಧಾನವಾಗಿ ಕರ್ಮ ಮಾಡುವ ಋಷಿಗಳು, ದೇವತೆಗಳು, ಮತ್ತು ಕರ್ಮಪ್ರಧಾನವಾಗಿ ಜ್ಞಾನದಿಂದ ಕರ್ಮಮಾಡುವವರು ಸೇರುವ ಗುರಿ ಒಂದೆ-ಅದು ಆ ಭಗವಂತನನ್ನು. ಇಲ್ಲಿ ಕರ್ಮಸಂನ್ಯಾಸವೇ ಬೇರೆ ಮತ್ತು ಕರ್ಮಯೋಗವೇ ಬೇರೆ ಎನ್ನುವುದು ಅರ್ಥ ಶೂನ್ಯ. ಇವೆರಡೂ ಒಂದಕ್ಕೊಂದು ಪೂರಕ. ಯಾರು ಈ ಸತ್ಯವನ್ನು ತಿಳಿಯುತ್ತಾರೋ ಅವರು’ತಿಳಿದವರು’

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *