ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 06

ಶ್ಲೋಕ – 18

ಯದಾ ವಿನಿಯತಂ ಚಿತ್ತಮಾತ್ಮನ್ಯೇವಾವತಿಷ್ಠತೇ ।
ನಿಸ್ಪೃಹಃ ಸರ್ವಕಾಮೇಭ್ಯೋ ಯುಕ್ತ ಇತ್ಯುಚ್ಯತೇ ತದಾ ॥೧೮॥

ಯದಾ ವಿನಿಯತಮ್ ಚಿತ್ತಮ್ ಆತ್ಮನಿ ಏವ ಅವತಿಷ್ಠತೇ ।

ನಿಸ್ಪೃಹಃ ಸರ್ವ ಕಾಮೇಭ್ಯಃ ಯುಕ್ತಃ ಇತಿ ಉಚ್ಯತೇ ತದಾ-ಚನ್ನಾಗಿ ಹದಗೊಂಡ ಒಳಬಗೆ ಭಗವಂತನಲ್ಲೆ ನೆಲೆಗೊಂಡಾಗ, ಎಲ್ಲ ಕಾಮಗಳ ಆಸೆ ಅಳಿದಾಗ ‘ಧ್ಯಾನಯೋಗಿ’ ಎನ್ನಿಸಿಕೊಳ್ಳುತ್ತಾನೆ.

ಯೋಗಾಭ್ಯಾಸದಿಂದ ಯೋಗಿಯ ಸ್ಥುಪ್ತಪ್ರಜ್ಞೆ ನಿಯಂತ್ರಣವಾಗುತ್ತದೆ. ಸಾಮಾನ್ಯವಾಗಿ ನಮ್ಮ ಚಿತ್ತದಲ್ಲಿರುವ ಹಿಂದಿನ ಕೆಟ್ಟ ನೆನಪುಗಳು ಸದಾ ನಮ್ಮನ್ನು ಕಾಡುತ್ತಿರುತ್ತವೆ. ಯಾವುದೋ ಹಗೆ, ಯಾವುದೋ ಪ್ರೀತಿ ಇವೆಲ್ಲವನ್ನೂ ಬದಿಗೊತ್ತಿ ಯೋಗಿ ತನ್ನ ಅಂತರಂಗದ ಪೀಠದಲ್ಲಿ ಕೇವಲ ಭಗವಂತನನ್ನು ಕೂರಿಸಬಲ್ಲ. ಹೀಗೆ ಮಾಡಿದಾಗ ಸದಾ ಅಂತರಂಗದಲ್ಲಿ ಭಗವಂತನ ದರ್ಶನವಾಗುತ್ತದೆ. ಆ ಭಗವಂತನನ್ನು ಕಂಡಮೇಲೆ ಇನ್ನೇನೂ ಬೇಕು ಎನ್ನಿಸುವುದಿಲ್ಲ. ಏಕೆಂದರೆ ಭಗವಂತ ನಾವು ಬಯಸುವ ಸಂಗತಿಗಳಲ್ಲೇ ಅತ್ಯಂತ ಶ್ರೇಷ್ಠ ವಾದ ಸಂಗತಿ. ಅಂತರಂಗದ ಆನಂದದ ಚಿಲುಮೆ ತೆರೆದುಕೊಂಡಾಗ ಕ್ಷುದ್ರವಾದ ಬಾಹ್ಯ ಕಾಮನೆಗಳು ಅಳಿದುಹೋಗಿ ಆತ ಧ್ಯಾನಯೋಗಿ ಎನ್ನಿಸಿಕೊಳ್ಳುತ್ತಾನೆ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *