ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 06

ಶ್ಲೋಕ – 26

ಯತೋ ಯತೋ ನಿಶ್ಚರತಿ ಮನಶ್ಚಂಚಲಮಸ್ಥಿರಮ್ ।
ತತಸ್ತತೋ ನಿಯಮ್ಯೈತದಾತ್ಮನ್ಯೇವ ವಶಂ ನಯೇತ್ ॥೨೬॥

ಯತಃ ಯತಃ ನಿಶ್ಚರತಿ ಮನಃ ಚಂಚಲಮ್ ಅಸ್ಥಿರಮ್ ।

ತತಃ ತತಃ ನಿಯಮ್ಯ ಏತತ್ ಆತ್ಮನಿ ಏವ ವಶಮ್ ನಯೇತ್ –ಗಟ್ಟಿಗೊಳ್ಳದೆ ಎತ್ತೆತ್ತ ಸರಿಯುವ ಬಗೆ ಯಾವೆಡೆಯೆಲ್ಲ ಹರಿಯಿತು ಆಯಾ ಕಡೆಯಿಂದ ಮತ್ತೆ ಹೊರಳಿಸಿ ಭಗವಂತನಲ್ಲೆ ನಿಲ್ಲುವಂತೆ ಹಿಡಿತಕ್ಕೆ ತರಬೇಕು.

ನಮ್ಮ ಮನಸ್ಸು ಬಹಳ ಚಂಚಲ. ಈ ಕಾರಣದಿಂದ ಅದು ಎಲ್ಲೆಡೆ ಹರಿಯುತ್ತಿರುತ್ತದೆ. ಅದು ಎಲ್ಲಿ ಎಲ್ಲಿ ಜಾರುತ್ತದೋ ಅಲ್ಲಿ ಅಲ್ಲಿ ಭಗವಂತನೆಂಬ ಒಡ್ಡು ಹಾಕಿ ಅದನ್ನು ಭಗವಂತನಲ್ಲಿ ನೆಲೆನಿಲ್ಲುವಂತೆ ಮಾಡಬೇಕು. ಇದಕ್ಕೆ ನಿರಂತರ ಪ್ರಯತ್ನ ಅಗತ್ಯ.

ಇವುಗಳೂ ನಿಮಗಿಷ್ಟವಾಗಬಹುದು

ಭಗವದ್ಗೀತೆ ಶ್ಲೋಕಗಳು : ಅಧ್ಯಾಯ – 13

ಶ್ಲೋಕ – 01 ಇದು ಭಗವದ್ಗೀತೆಯ ಮೂರನೇ ಷಟ್ಕದ ಮೊದಲ ಅಧ್ಯಾಯ. ಗೀತೆಯ ಈ ಹದಿಮೂರನೇ ಅಧ್ಯಾಯ ಒಂದು ಅಪೂರ್ವ …

Leave a Reply

Your email address will not be published. Required fields are marked *